ಉಡುಪಿ, ಅ.13: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂ.ಗಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8277799990 ಅಥವಾ ಆಯಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಉಡುಪಿ: 0820-2574596, ಕುಂದಾಪುರ: 08254-23070, ಕಾರ್ಕಳ: 08258-231101ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor