ಉಚ್ಚಿಲದತ್ತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಯಾಣ
ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲು ಗುರುವಾರ ಮಂಗಳೂರಿಗೆ ಆಗಮಿಸಿದ ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಗೌರವ ರಕ್ಷೆಯೊಂದಿಗೆ ಸ್ವಾಗತಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಮತ್ತಿತರರು ಉಪಸ್ಥಿತರಿದ್ದರು.
ಕಾಪು ತಾಲೂಕಿನ ಉಚ್ಚಿಲದಲ್ಲಿ ನಡೆದಿರುವ ಉಡುಪಿ ಉಚ್ಚಿಲ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಉಚ್ಚಿಲಕ್ಕೆ ಪ್ರಯಾಣ ಬೆಳೆಸಿದ್ದಾರೆ.