ಡಿಸೆಂಬರ್ ಕೊನೆಯೊಳಗೆ ಶಿವಪುರ ಸೇತುವೆ ಕಾಮಗಾರಿ ಮುಗಿಸಿ: ಅಧಿಕಾರಿಗಳಿಗೆ ಸಂಸದ ಕೋಟ ಸೂಚನೆ
ಉಡುಪಿ, ಅ.17: ಬಹಳ ದಿನಗಳಿಂದ ನೆನೆಗುದಿಗೆಗೆ ಬಿದ್ದಿರುವ ಶಿವಪುರ ಪಂಚಾಯತ್ ಕಡೆಯಿಂದ ಸುಮಾರು 1 ಕೀ ಮೀ ಸೇತುವೆ ಸಹಿತ ರಸ್ತೆಯನ್ನು ಡಿಸೆಂಬರ್ ತಿಂಗಳ ಅಂತ್ಯದೊಳಗೆ ಮುಗಿಸಬೇಕೆಂದು ಸಂಸದ ಕೋಟ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪಾಡಿಗಾರು ವ್ಯಾಪ್ತಿಯ ಸುಮಾರು 1.3 ಕೀಮೀ ಅರಣ್ಯ ತೆರವು ಕಾರ್ಯಾಚರಣೆ ಪರಿಶೀಲಿಸಿದ ಕೋಟ ಈಗಾಗಲೇ ಅರಣ್ಯ ಇಲಾಖೆ ಅನುಮತಿ ನೀಡಿರುವುದರಿಂದ ಕಾಮಗಾರಿಗೆ ವೇಗ ಕೊಡಲು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಅದೇ ರೀತಿ ಆತ್ರಾಡಿ ಪರಿಸರದ ಸಾರ್ವಜನಿಕರಿಂದ ಮನವಿ ಸ್ವೀಕರಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿಶೇಷ ತಿರುವು ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಸಂಸದರೊಂದಿಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಾದ ಮಂಜನ ಗೌಡ, ನವೀನ್, ಶಶಿಧರ್, ಶಿವಪುರ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷ ಸುರೇಶ್ ಶೆಟ್ಟಿ, ತಾಪಂ ಮಾಜಿ ಸದಸ್ಯರಾದ ರಮೇಶ್ ಪೂಜಾರಿ, ರತ್ನಾಕರ ಶೆಟ್ಟಿ ಆತ್ರಾಡಿ, ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯದರ್ಶಿ ಶ್ರೀನಿಧಿ ಹೆಗ್ಡೆ ಉಪಸ್ಥಿತರಿದ್ದರು.