ಉಡುಪಿ, ಅ.19: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಶ್ರೀಕೃಷ್ಣ ಸಭಾಂಗಣದಲ್ಲ್ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ನಡೆಯಿತು.

ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಕಾರ್ಯಕ್ರಮ ಉದ್ಘಾಟಿಸಿ, ಮಾನಸಿಕ ಆರೋಗ್ಯಗಳ ಕುರಿತಂತೆ ಮಾಹಿತಿ ಗಳನ್ನು ಹಂಚಿಕೊಂಡರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಸವರಾಜ ಜಿ.ಹುಬ್ಬಳ್ಳಿ ಅಧ್ಯಕ್ಷತೆ ವಹಿಸಿದ್ದರು.

ಉಡುಪಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ಲತಾ ನಾಯಕ್, ಟೆಲಿಮನಸ್, ಇ.ಸಿ.ಆರ್.ಸಿ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಬರುವ ಇತರ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗ, ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor