ಕುಂದಾಪುರ ವಲಯ ಮಟ್ಟದ ಬಾಲಕ- ಬಾಲಕಿಯರ ಕ್ರೀಡಾಕೂಟ ಉದ್ಘಾಟನೆ
ಕುಂದಾಪುರ, ಅ.23: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ, ಹಾಗೂ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಪ್ರವರ್ತಿತ ವಿದ್ಯಾರಣ್ಯ ಇಂಗ್ಲೀಷ್ ಮೀಡಿಯಂ ಸ್ಕೂಲ್ನ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್ನಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ಕುಂದಾಪುರ ವಲಯ ಮಟ್ಟದ 14 ಮತ್ತು 17 ವರ್ಷದೊಳಗಿನ ಬಾಲಕ-ಬಾಲಕಿಯರ ಕ್ರೀಡಾಕೂಟ 2026-27ನ್ನು ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು.
ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಇದರ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ ಮಾತನಾಡಿದರು. ಕುಂದಾಪುರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಕ್ರೀಡಾ ಜ್ಯೋತಿ ಪ್ರಜ್ವಲಿಸಿದರು. ಉದ್ಯಮಿ ಅರುಣ್ ಕುಮಾರ್ ಹೆಗ್ಡೆ ಬಲೂನ್ ಹಾರಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ವಾಲಿಬಾಲ್ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶ್ರೀಹರಿ ಅವರನ್ನು ಸನ್ಮಾನಿಸಲಾ ಯಿತು. ಗುತ್ತಿಗೆದಾರ ಅರುಣ್ ಕುರ್ಮಾ ಹೆಗ್ಡೆ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಚಂದ್ರ ನಾಯಕ್, ಗುತ್ತಿಗೆದಾರ ಗಣೇಶ್ ಶೆಟ್ಟಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಗ್ರೇಡ್-1 ಕುಸುಮಾರ ಶೆಟ್ಟಿ, ಗ್ರೇಡ್-2 ಅಧ್ಯಕ್ಷ ಕಿಶನ್ರಾಜ್ ಶೆಟ್ಟಿ, ಕುಂದಾಪುರ ವಲಯದ ಬಾಲಕೃಷ್ಣ ಶೆಟ್ಟಿ, ಉಶಾಲತಾ, ಕ.ರಾಜ್ಯ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಉದಯ ಮಡಿವಾಳ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಶೇಖರ ಪೂಜಾರಿ, ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರದೀಪ್ ಕುರ್ಮಾ, ನಿವೃತ್ತ ಜಿಲ್ಲಾ ದೈಹಿಕ ಶಿಕ್ಷಕ ಅಧೀಕ್ಷಕ ಚಂದ್ರಶೇಖರ ಶೆಟ್ಟಿ, ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಇದರ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸುಜ್ಞಾನ ಪದವಿ ಪೂರ್ವ ಕಾಲೇಜಿನ ರಂಜನ್ ಬಿ.ಶೆಟ್ಟಿ, ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಪ್ರದೀಪ್, ವಿದ್ಯಾರಣ್ಯ ಗ್ಲೋಬಲ್ ಶಾಲೆಯ ಪ್ರಾಂಶುಪಾಲೆ ಅನಿತಾ, ಉಪ ಪ್ರಾಂಶುಪಾಲೆ ಸ್ಪೂರ್ತಿ ಮೊದಲಾದವರಿದ್ದರು.
ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಸ್ವಾಗತಿಸಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಲಾಸ್ಯ ಮಧ್ಯಸ್ಥ ಕ್ರೀಡಾ ಪ್ರತಿಜ್ಞೆ ಬೋಧಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಚಂದ್ರಶೇಖರ ಬೀಜಾಡಿ, ವಿಜಯಕುರ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಸುಜ್ಞಾನ್ ಪಿಯು ಕಾಲೇಜು ಉಪನ್ಯಾಸಕ ರಜತ್ ಭಟ್ ವಂದಿಸಿದರು.