ಅಪರಿಚಿತ ಗಂಡಸಿನ ಮೃತದೇಹ ಪತ್ತೆ
ಕಾಪು, ಆ.24: ಪಾಂಗಾಳ ರಾಷ್ಟ್ರೀಯ ಹೆದ್ದಾರಿ 66ರ ಬದಿಯಲ್ಲಿರುವ ಅಂಗಡಿ ಹೊರಜಗುಲಿಯಲ್ಲಿ ಶನಿವಾರ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕೆಲವು ತಿಂಗಳುಗಳಿಂದ ಅಂಗಡಿಯ ಮಾಲಕರು ವ್ಯಾಪಾರ ಸ್ಥಗಿತಗೊಳಿಸಿದ್ದು, ಬಾಗಿಲು ತೆರೆಯದೆ ಮುಚ್ಚಿಟ್ಟಿದ್ದರು. ಮಾಲಿಕರು ಅಂಗಡಿ ವಠಾರ ಶುಚಿಗೊಳಿಸಲು ಬಂದಾಗ ಘಟನೆ ಬೆಳಕಿಗೆ ಬಂದಿದೆ. ವ್ಯಕ್ತಿ ಮೃತಪಟ್ಟು ಹತ್ತು ದಿನಗಳು ಕಳೆದಿರುವ ಶಂಕೆ ವ್ಯಕ್ತವಾಗಿದೆ. ಮೃತವ್ಯಕ್ತಿಯ ಹೆಸರು ವಿಳಾಸ ತಿಳಿದುಬಂದಿಲ್ಲ. ಮೃತರ ವಾರುಸುದಾರರು ಕಾಪು ಪೋಲಿಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಕಾಪು ಪೋಲಿಸ್ ಠಾಣೆಯ ಮುಖ್ಯ ಆರಕ್ಷಕ ಅರುಣ್ ಉಪ್ಪೂರು, ಆರಕ್ಷಕ ಸಿಬ್ಬಂದಿ ಶಿವ ನಾಯಕ್ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಕೊಳೆತ ಕಳೇಬರ ತೆರವುಗೊಳಿಸಿ, ಉಡುಪಿ ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ನೆರವಾದರು.