ಉಡುಪಿ, ಅ.27: ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ರಜತ ಸಂಭ್ರಮದ ಸರಣಿ ಕಾರ್ಯಕ್ರಮ ಗಳ ಪ್ರಯುಕ್ತ ವೈದ್ಯಕೀಯ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕೊಡವೂರಿನಲ್ಲಿ ಹಮ್ಮಿಕೊಳ್ಳ ಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸುಮನಸಾ ಕೊಡವೂರು ರಜತ ಸಂಭ್ರಮ ಸಮಿತಿ ಅಧ್ಯಕ್ಷ ಹರಿಪ್ರಸಾದ್ ರೈ ಮಾತನಾಡಿ, ಆರೋಗ್ಯವಂತ ಪ್ರಜೆಯು ರಾಜ್ಯ ಮತ್ತು ದೇಶವನ್ನು ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾನೆ. ಆರೋಗ್ಯವಂತ ವ್ಯಕ್ತಿಗಳಿಂದ ದೇಶ ಸುಭಿಕ್ಷವಾಗಿರುತ್ತದೆ ಎಂದು ಹೇಳಿದರು.

ಉದ್ಯಮಿ ನಾಗರಾಜ ಸುವರ್ಣ ಶಿಬಿರವನ್ನು ಉದ್ಘಾಟಿಸಿದರು. ಸಾಮಾಜಿಕ ಕಾರ್ಯಕರ್ತ ಜನಾರ್ದನ ಕೊಡವೂರು ಮಾತನಾಡಿದರು. ಸಂಸ್ಥೆಯ ಅಧ್ಯಕ್ಷ ಪ್ರಕಾಶ್ ಜಿ.ಕೊಡವೂರು, ಕೆ.ಎಂ.ಸಿ ಮಣಿಪಾಲ ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ.ಜಾರ್ಜ್, ಭಾರತೀಯ ಕ್ಯಾನ್ಸರ್ ಸೊಸೈಟಿಯ ಸಾಮಾಜಿಕ ಕಾರ್ಯಕರ್ತೆ ಸುನಿತಾ, ಶಿಬಿರದ ಸಂಯೋಜಕರಾದ ಮುರುಗೇಶ್, ಜಗದೀಶ್ ಚೆನ್ನಂಗಡಿ ಉಪಸ್ಥಿತರಿದ್ದರು. ಯೋಗೀಶ್ ಕೊಳಲಗಿರಿ ಕಾರ್ಯಕ್ರಮ ನಿರೂಪಿಸಿದರು.

ಉಡುಪಿ ಜಿಲ್ಲಾ ಆಸ್ಪತ್ರೆ, ಕೆಎಂಸಿ ಮಣಿಪಾಲ, ಉಡುಪಿಯ ಆದರ್ಶ ಆಸ್ಪತ್ರೆ, ಮಣಿಪಾಲದ ದಂತ ಮಹಾ ವಿದ್ಯಾಲಯ, ಮಣಿಪಾಲದ ಎಚ್ಪಿರ್ಆ ಗ್ರೂಪ್ ಸಹಯೋಗದಲ್ಲಿ ನಡೆದ ಈ ಶಿಬಿರದಲ್ಲಿ ನೂರಾರು ಜನರು ಇಸಿಜಿ, ರಕ್ತದೊತ್ತಡ ಪರೀಕ್ಷೆ, ಹಿಮೋಗ್ಲೋಬಿನ್ ಪ್ರಮಾಣ ತಪಾಸಣೆ, ದಂತ ತಪಾಸಣೆ, ಗರ್ಭಕಂಠದ ಕ್ಯಾನ್ಸರ್ ತಪಾಸಣೆ, ಸ್ತನ ಕ್ಯಾನ್ಸರ್ ಪರೀಕ್ಷೆ, ಚರ್ಮರೋಗ, ಮೂಳೆ ಸಾಂದ್ರತೆ, ಕಿವಿ, ಮೂಗು, ಗಂಟಲು ತಪಾಸಣೆ, ಕಣ್ಣು ತಪಾಸಣೆ ಮಾಡಿಸಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor