ಬ್ರಹ್ಮಾವರ : ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆ, ಬ್ರಹ್ಮಾವರ ವತಿಯಿಂದ ಬ್ಯೂಟಿ ಪಾರ್ಲರ್ ತರಬೇತಿ ಕಾರ್ಯಕ್ರಮ ಉದ್ಘಾಟನಾ ಸಮಾರಂಭ ಸಂಸ್ಥೆಯ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಮಹಿಳಾ ಒಕ್ಕೂಟದ ಮಹಿಳಾ ಪ್ರಧಾನ ಕಾರ್ಯದರ್ಶಿ ಪ್ರೇಮ ಮಂಜುನಾಥ ಮಾತನಾಡಿ, ಮಹಿಳೆಯರಿಗೆ ಬಹಳ ಪ್ರಿಯವಾದ ಹಾಗೂ ಆಸಕ್ತಿಯ ಕ್ಷೇತ್ರವೆಂದರೆ ಅದು ಬ್ಯೂಟಿ ಪಾರ್ಲರ್ ನಿರ್ವಹಣೆ ಎಂದು ಹೇಳಬಹುದು. ಹಾಗಾಗಿ ಆಸಕ್ತಿಯ ಕ್ಷೇತ್ರವನ್ನೇ ಉದ್ಯಮವನ್ನಾಗಿ ಪರಿವರ್ತಿಸಿ ಕೊಂಡಲ್ಲಿ ಆರ್ಥಿಕ ಸಬಲೀಕರಣ ವಾಗುವುದರಲ್ಲಿ ಸಂದೇಹವಿಲ್ಲ. ಹಾಗಾಗಿ ಅವಕಾಶಗಳನ್ನು ಸರಿಯಾಗಿ ಬಳಸಿ ಕೊಂಡಲ್ಲಿ ನಾವೆಲ್ಲರೂ ಸ್ವಾವಲಂಬಿ ಬದುಕಿನತ್ತ ಹೆಜ್ಜೆ ಹಾಕಬಹುದು ಎಂದರು.

ಕುಂಭಾಶಿ ಗ್ರಾಪಂ ಮಾಜಿ ಅಧ್ಯಕ್ಷೆ ಹಾಗೂ ಮಹಿಳಾ ಉದ್ಯಮಿ ಶ್ವೇತಾ ಶ್ರೀನಿಧಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿ ದರು. ಅಧ್ಯಕ್ಷತೆಯನ್ನು ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಡಾ.ಬೊಮ್ಮಯ್ಯ ಎಂ. ವಹಿಸಿದ್ದರು.

ಉಪನ್ಯಾಸಕಿ ಚೈತ್ರ ಕೆ. ಕಾರ್ಯಕ್ರಮ ನಿರೂಪಿಸಿ, ಕಚೇರಿ ಸಹಾಯಕ ಶಾಂತಪ್ಪ ಸ್ವಾಗತಿಸಿದರು. ಹಿರಿಯ ಉಪನ್ಯಾಸಕ ಸಂತೋಷ್ ಶೆಟ್ಟಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor