ಉಡುಪಿ, ಅ.28: ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯ ಬಳಿ ಬುಧವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿ, ಕರ್ನಾಟಕ ವಿಧಾನ ಪರಿಷತ್ತಿಗೆ ನಡೆದ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಎಲ್ಲಾ ನಾಲ್ಕು ಅಭ್ಯರ್ಥಿಗಳನ್ನು ಭರ್ಜರಿ ಬಹುಮತದೊಂದಿಗೆ ಗೆಲ್ಲಿಸುವ ಮೂಲಕ ಸುಶಿಕ್ಷಿತ ಮತದಾರರು ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಆಡಳಿತ ವೈಫಲ್ಯಕ್ಕೆ ತಕ್ಕ ಉತ್ತರ ನೀಡಿದ್ದಾರೆ. ಈ ಚುನಾವಣಾ ಗೆಲುವು ಮುಂದಿನ ಎಲ್ಲಾ ಚುನಾವಣೆಗಳಿಗೆ ದಿಕ್ಸೂಚಿಯಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮುಖಂಡ ರಾದ ಕುಯಿಲಾಡಿ ಸುರೇಶ್ ನಾಯಕ್, ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್, ನಳಿನಿ ಪ್ರದೀಪ್ ರಾವ್, ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ಶ್ರೀನಿಧಿ ಹೆಗ್ಡೆ, ಪ್ರಿಯದರ್ಶಿನಿ ದೇವಾಡಿಗ, ದಿವಾಕರ ಶೆಟ್ಟಿ ಕಲ್ಯಾ, ಮಂಜುನಾಥ್ ಮಣಿಪಾಲ, ದಿನೇಶ್ ಅಮೀನ್, ಜಗದೀಶ್ ಆಚಾರ್ಯ ಕಪ್ಪೆಟ್ಟು, ಪ್ರಭಾಕರ ಪೂಜಾರಿ, ಪ್ರವೀಣ್ ಕುರ್ಮಾ ಗುರ್ಮೆ, ರಾಜೇಂದ್ರ ಪಂದುಬೆಟ್ಟು, ರತ್ನಾಕರ ಇಂದ್ರಾಳಿ, ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಸಲೀಂ ಅಂಬಾಗಿಲು, ದಾವೂದ್ ಅಬೂಬಕರ್ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor