ಉಡುಪಿ,ಅ.29: ವಿದ್ಯಾರ್ಥಿಗಳ ಪ್ರತಿಭೆ ಹಾಗೂ ಕೌಶಲ್ಯ ವೃದ್ಧಿಗೆ ವಸ್ತುಪ್ರದರ್ಶನಗಳು ಸಹಕಾರಿಯಾಗಿವೆ. ಪಠ್ಯಕ್ರಮದ ಹೊರಗೆ ’ಮಾಡಿ- ಕಲಿ’ ವಿಧಾನದಿಂದ ಮಾದರಿಗಳನ್ನು ತಯಾರಿಸಿ, ಅದನ್ನು ಸಮಾಜಮುಖಿ ಯಾಗಿ ಉಪಯೋಗಿಸಲು ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳು ಕಾರ್ಯತತ್ಪರ ರಾಗಬೇಕೆಂದು ಅಕಾಡೆಮಿ ಆಫ್ ಜನರಲ್ ಎಜ್ಯುಕೇಷನ್‌ನ ಕಾರ್ಯದರ್ಶಿ ಡಾ.ನಾರಾಯಣ ಸಭಾಹಿತ್ ಹೇಳಿದ್ದಾರೆ.

ಉಡುಪಿ ಎಂಜಿಎಂ ಕಾಲೇಜಿನ ವಿಜ್ಞಾನ, ಕಂಪ್ಯುಟರ್ ವಿಜ್ಞಾನ, ವಾಣಿಜ್ಯ ಹಾಗೂ ಮಾನವಿಕ ವಿಭಾಗಗಳ ವತಿ ಯಿಂದ ಆಯೋಜಿಸಲಾದ ’ಸಿನರ್ಜಿ 2026’ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಅಕಾಡೆಮಿ ಅಫ್ ಜನರಲ್ ಎಜ್ಯುಕೇಷನ್‌ನ ಆಡಳಿತಾಧಿಕಾರಿ ಡಾ.ಕೆ.ಶ್ರೀಧರ ರಂಗನಾಥ ಪೈ, ಉಪಪ್ರಾಂಶುಪಾಲ ಡಾ.ಎಂ.ವಿಶ್ವನಾಥ ಪೈ, ಟಿ.ಮೋಹನದಾಸ್ ಪೈ ಕೌಶಲ ಅಭಿವೃದ್ಧಿ ಕೇಂದ್ರದ ನಿರ್ದೇಶಕ ಟಿ.ರಂಗ ಪೈ, ಪ.ಪೂ.ಕಾಲೇಜಿನ ಪ್ರಾಂಶುಪಾಲೆ ಎ.ಮಾಲತಿ ದೇವಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ವೀರಾ ಐಡಾ ಪಿಂಟೋ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲೆ ಡಾ.ಗಾಯತ್ರಿ ಪೈ ಸ್ವಾಗತಿಸಿದರು. ಸಿನರ್ಜಿ ಸಂಚಾಲಕಿ ಪ್ರೊ.ಶೈಲಜಾ ಎಚ್. ವಂದಿಸಿದರು. ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಸುಚಿತ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor