ಉಡುಪಿ, ಅ.29: ರೋಟರಿ ಕ್ಲಬ್ ಆಫ್ ಮಣಿಪಾಲ್, ರೋಟರಿ ಹೊಂಗಿರಣ- ಸಮಗ್ರ ಮಕ್ಕಳ ಮಾರ್ಗದರ್ಶನ ಮತ್ತು ಬೆಳವಣಿಗೆ ಕೇಂದ್ರ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಉಡುಪಿ ಡಾ. ಎ.ವಿ. ಬಾಳಿಗ ಸ್ಮಾರಕ ಆಸ್ಪತ್ರೆ, ಆಟಿಸಂ ಸೊಸೈಟಿ ಆಫ್ ಉಡುಪಿ ಹಾಗೂ ವಿದ್ಯೋದಯ ಪಬ್ಲಿಕ್ ಸ್ಕೂಲ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಶಿಕ್ಷಕರಿಗಾಗಿ ಸಮಗ್ರ ಶಿಕ್ಷಣ ಕುರಿತ ಒಂದು ದಿನದ ಕಾರ್ಯಾಗಾರವನ್ನು ಉಡುಪಿ ವಿದ್ಯೋದಯ ಪಬ್ಲಿಕ್ ಸ್ಕೂಲ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲ ಡಾ.ಅಶೋಕ ಕಾಮತ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಉಡುಪಿ ಡಾ.ಎ.ವಿ.ಬಾಳಿಗ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ.ಪಿ.ವಿ. ಭಂಡಾರಿ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಮಣಿಪಾಲ ರೋಟರಿ ಕ್ಲಬ್ ಅಧ್ಯಕ್ಷ ಡಾ.ಪ್ರದೀಪ್, ಮಣಿಪಾಲ ಸೋನಿಯಾ ಕ್ಲಿನಿಕ್‌ನ ಸ್ತ್ರೀ ರೋಗ ಮತ್ತು ಪ್ರಸೂತಿ ತಜ್ಞೆ ಡಾ.ಗಿರಿಜಾ, ವಿದ್ಯೋದಯ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲೆ ಅನಿತಾ ರಾಜ್, ಬೆಂಗಳೂರು ಇಶಾನ್ಯ ಇಂಡಿಯಾ ಫೌಂಡೇಶನ್‌ನ ಪ್ರಾಜೆಕ್ಟ್ ಡೈರೆಕ್ಟರ್ ಅನೂಪ್ ಸಿಂಹ ಭಾಗವಹಿಸಿದ್ದರು.

ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ ಸ್ವಾಗತಿಸಿದರು. ರೋಟರಿ ಕ್ಲಬ್ ಕಮ್ಯುನಿಟಿ ಸರ್ವೀಸ್ ಡೈರೆಕ್ಟರ್ ನಾಗರಾಜ ಶೆಟ್ಟಿ ವಂದಿಸಿದರು. ಆಸ್ಪತ್ರೆಯ ಆಪ್ತಸಮಾಲೋಚಕಿ ದೀಪಶ್ರೀ ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮದ ನಂತರ ಸಂಪನ್ಮೂಲ ವ್ಯಕ್ತಿಗಳಾದ ಡಾ.ಪಿ.ವಿ. ಭಂಡಾರಿ, ಡಾ.ಅಶೋಕ ಕಾಮತ್, ಡಾ.ಎ.ವಿ.ಬಾಳಿಗ ಸ್ಮಾರಕ ಅಸ್ಪತ್ರೆಯ ಮನಶಾಸ್ತ್ರಜ್ಞ ನಾಗರಾಜ್ ಮೂರ್ತಿ, ಅನೂಪ್ ಸಿಂಹ ಮಕ್ಕಳ ಭಾವನಾ ತ್ಮಕ ಮತ್ತು ವರ್ತನಾ ಸಮಸ್ಯೆಗಳು, ಕಲಿಕೆಯಲ್ಲಿ ಸಮಾನ ಅವಕಾಶಗಳು, ನಿರ್ದಿಷ್ಟ ಕಲಿಕಾ ನ್ಯೂನತೆ, ತರಗತಿ ನಿರ್ವಹಣೆ ಹಾಗೂ ವಿವಿಧ ರೀತಿಯ ಕಲಿಕಾರ್ಥಿಗಳ ಅಗತ್ಯತೆಗಳ ಕುರಿತು ಮಾಹಿತಿ ನೀಡಿದರು. 200ಕ್ಕೂ ಹೆಚ್ಚಿನ ಶಿಕ್ಷಕರು ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor