ಮೂಡ್ಲಕಟ್ಟೆ: ಸಂಚಾರ ಜಾಗೃತಿ ಕಾರ್ಯಕ್ರಮ
ಕುಂದಾಪುರ: ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮಾಹಿತಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋಟರಿ ಕ್ಲಬ್ ಕಲ್ಯಾಣಪುರದ ಸಹಯೋಗ ದೊಂದಿಗೆ ಸೇಫ್ ಸ್ಟ್ರೀಟ್ ಸ್ಮಾರ್ಟ್ ಯೂತ್ ಶೀರ್ಷಿಕೆಯಡಿ ಸಂಚಾರ ಜಾಗೃತಿ ಕಾರ್ಯಕ್ರಮವನ್ನು ಅ.27ರಂದು ಆಯೋಜಿಸಲಾಗಿತ್ತು.
ಮುಖ್ಯ ಅತಿಥಿಯಾಗಿ ಕುಂದಾಪುರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಅನೂಪ್ ನಾಯಕ್, ವಿದ್ಯಾರ್ಥಿಗಳಿಗೆ ಸಂಚಾರ ನಿಯಮಗಳು, ರಸ್ತೆ ಸುರಕ್ಷತೆ ಹಾಗೂ ಜವಾಬ್ದಾರಿಯುತ ವಾಹನ ಚಾಲನೆಯ ಮಹತ್ವದ ಕುರಿತು ಮಾಹಿತಿ ನೀಡಿದರು.
ರೋಟರಿ ಕ್ಲಬ್ ಕಲ್ಯಾಣಪುರದ ಸದಸ್ಯ ಅಲೆನ್ ವಿನಯ್ ಲೂಯಿಸ್ ಸಂಚಾರ ಜಾಗೃತಿ ಪ್ರತಿಜ್ಞೆಯನ್ನು ಬೋಧಿಸಿ ದರು. ಐಎಂಜೆ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕ ಡಾ.ಎಸ್.ಎನ್.ಭಟ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಕಲ್ಯಾಣಪುರದ ಅಧ್ಯಕ್ಷ ಗಿರೀಶ್ಚಂದ್ರ ಆರ್., ಸಂಸ್ಥೆಯ ಪ್ರಾಂಶುಪಾಲ ಡಾ.ರಾಮಕೃಷ್ಣ ಹೆಗ್ಡೆ ಉಪಸ್ಥಿತರಿದ್ದರು.
ಮಾಹಿತಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಮುಖ್ಯಸ್ಥೆ ಪ್ರೊ.ಲಕ್ಷ್ಮಿ ಜಿ. ಸ್ವಾಗತಿಸಿದರು. ಸಂಯೋಜಕಿ ಪ್ರೊ.ನಿರುಪಮಾ ಜಿ.ಎನ್. ರಾಷ್ಟ್ರೀಯ ಸೇವಾ ಯೋಜನೆಯ ಉದ್ದೇಶ ಹಾಗೂ ಮಹತ್ವದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಸಂಯೋಜಕಿ ಪ್ರೊ.ದೃಶ್ಯಾ ಶೆಟ್ಟಿ ವಂದಿಸಿದರು. ವಿದ್ಯಾರ್ಥಿನಿ ಚೇತನಾ ಏಕಪಾತ್ರಾಭಿನಯ ಪ್ರದರ್ಶಿಸಿದರು.