ಉಡುಪಿ, ಅ.29: ಪ್ರಥಮ ಚಿಕಿತ್ಸೆ ಕುರಿತು ಅರಿವು, ಸಂಕಷ್ಟದ ಸಂದರ್ಭ ದಲ್ಲಿ ತಮ್ಮನ್ನು ರಕ್ಷಿಸಿಕೊಳ್ಳಲು ಮತ್ತು ಇತರರು ಕಷ್ಟದಲ್ಲಿದ್ದಾಗ ಸಹಾಯ ಮಾಡಲು ಸಹಕಾರಿಯಾಗುತ್ತದೆ. ಹೀಗಾಗಿ ಪ್ರಥಮ ಚಿಕಿತ್ಸೆಯ ಪ್ರಾಥಮಿಕ ಅರಿವು ಎಲ್ಲರಿಗೂ ಮುಖ್ಯ ಎಂದು ಜಿಲ್ಲಾ ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಹೇಳಿದ್ದಾರೆ.

ಉಡುಪಿಯ ವಿದ್ಯಾರತ್ನ ನಸಿರ್ಂಗ್ ಕಾಲೇಜಿನಲ್ಲಿ ಜಿಲ್ಲಾ ರೆಡ್‌ಕ್ರಾಸ್ ಸಂಸ್ಥೆ ಮತ್ತು ವಿದ್ಯಾರತ್ನ ನಸಿರ್ಂಗ್ ಕಾಲೇಜುಗಳ ಜಂಟಿ ಆಶ್ರಯದಲ್ಲಿ ನಡೆದ ಒಂದು ದಿನದ ಪ್ರಥಮ ಚಿಕಿತ್ಸೆ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕಾಲೇಜಿನ ಪ್ರಾಂಶುಪಾಲೆ ಅನಿತಾ ಸಿ. ರಾವ್ ಅಧ್ಯಕ್ಷತೆ ವಹಿಸಿದ್ದರು. ಡಾ. ಎ.ವಿ.ಬಾಳಿಗಾ ಆಸ್ಪತ್ರೆಯ ವೈದ್ಯಾಧಿ ಕಾರಿ ಡಾ. ಕಾವ್ಯ ಹಾಗೂ ಖ್ಯಾತ ಮೂಳೆ ತಜ್ಞ ಡಾ. ಸುರೇಶ್ ಶೆಣೈ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

ಉಪಪ್ರಾಂಶುಪಾಲ ಡಾ. ರಮೇಶ್ ಎಂ. ಕೆ., ಆಡಳಿತಾಧಿಕಾರಿ ಡಾ. ರವಿ ಪಾಲನ್, ಸಿಟಿ ಆಸ್ವತ್ರೆಯ ನಸಿರ್ಂಗ್ ಸುಪರಿಟೆಂಟ್ ಮರಿಯಾ ಆಳ್ವ, ಮಾಲಿನಿ ಮೆರಿಟ ಕುಂದರ್ ಉಪಸ್ಥಿತರಿದ್ದರು.

ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಪ್ರೀತಿ ಫೆನಾರ್ಂಡಿಸ್ ಸ್ವಾಗತಿಸಿ, ಮೆರಿಟಾ ಮೆಂಡೋನ್ಸಾ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor