ಮೀನುಗಾರಿಕೆಗೆ ತೆರಳಿದ್ದ ಇಬ್ಬರು ನಾಪತ್ತೆ
ಉಡುಪಿ, ಅ.29: ಕೊಡವೂರು ಗ್ರಾಮದ ಮಲ್ಪೆ ಬಂದರಿನಲ್ಲಿ ಶ್ರೀರಾಂಜನೇಯ ಪರ್ಸಿನ್ ಬೋಟ್‌ನಲ್ಲಿ ಮೀನುಗಾರಿ ಕೆಗೆ ತೆರಳಿದ್ದ ದ್ವಾರಿಕಾ ಶಿಕಾರ್ (28) ಹಾಗೂ ಓಂ ಶ್ರೀದತ್ತ ಮೀನುಗಾರಿಕಾ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದ ಪ್ರಮೋದ್ ಗೌಡ (53) ಎಂಬ ಇಬ್ಬರು ವ್ಯಕ್ತಿಗಳು ಪ್ರತ್ಯೇಕ ಪ್ರಕರಣಗಳಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರದ ನೀರಿಗೆ ಬಿದ್ದು ಕಾಣೆಯಾಗಿದ್ದಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಪೊಲೀಸ್ ಠಾಣೆ: 0820- 2537999, ಪಿ.ಎಸ್.ಐ ನಂ.: 9480805447, ಉಡುಪಿ ವೃತ್ತ ನಿರೀಕ್ಷಕರ ನಂ.:9480805430 ಅನ್ನು ಸಂಪರ್ಕಿಸಬಹುದು ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರ ಪ್ರಕಟಣೆ ತಿಳಿಸಿದೆ.