ಉಡುಪಿ: ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಬೃಹತ್ ರಕ್ತದಾನ ಶಿಬಿರ
ಉಡುಪಿ, ಅ.29: ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ಸಹಯೋಗದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಇಂದು ನಗರದ ಪುರಭವನದಲ್ಲಿ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರದೊಂದಿಗೆ ಸುಮಾರು 200 ಮಂದಿ ಅಂಗವಿಕಲ ಮಕ್ಕಳಿಗೆ ಪೌಷ್ಟಿಕ ಆಹಾರದ ಕಿಟ್ನ ವಿತರಿಸುವ ಕಾರ್ಯಕ್ರಮ ವನ್ನು ಆಯೋಜಿಸಿತ್ತು.
ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಹಾಗೂ ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯಕುಮಾರ್ ಸೊರಕೆ ಮಾತನಾಡಿ, ರಕ್ತದಾನವು ಅಮೂಲ್ಯ ಜೀವಗಳನ್ನು ಉಳಿಸುವ ಮಹತ್ವದ ಕಾರ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಮಾಜಿ ಅಧ್ಯಕ್ಷ ಅಶೋಕ್ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡ ರಾದ ಮುನಿಯಾಲು ಉದಯ ಕುಮಾರ್ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್ರಾಜ್ ಕಾಂಚನ್, ಬಿ.ಭುಜಂಗ ಶೆಟ್ಟಿ ಭಾಗವಹಿಸಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅಧ್ಯಕ್ಷತೆ ವಹಿಸಿದ್ದರು. ಇಂದು ಹುಟ್ಟುಹಬ್ಬವನ್ನು ಆಚರಿಸಿಕೊಂಡ ಕಾಂಚನ್ರನ್ನು ಅವರ ರಾಜಕೀಯ ಹಾಗೂ ಸಾಮಾಜಿಕ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಇದರೊಂದಿಗೆ ಹಾಲಿ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಹಾಗೂ ನಿರ್ಗಮಿತ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರುರನ್ನು ಸಹ ಗೌರವಿಸಲಾಯಿತು.
ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಕಾಂಗ್ರೆಸ್ ಮುಖಂಡರಾದ ದಿನಕರ ಹೇರೂರು, ಪ್ರಶಾಂತ ಜತ್ತನ್ನ, ರಾಜು ಪೂಜಾರಿ, ದಿನೇಶ್ ಪುತ್ರನ್, ದಿವಾಕರ ಕುಂದರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್, ಮಮತಾ ಶೆಟ್ಟಿ, ಅನಿತಾ ಬಾಬು ಪೂಜಾರಿ, ಹರೀಶ್ ಕಿಣಿ ಅಲೆವೂರು, ಸೌರಭ್ ಬಲ್ಲಾಳ್ ಮುಂತಾದವರು ಉಪಸ್ಥಿತರಿದ್ದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಸತೀಶ್ ಕೊಡವೂರು ಸ್ವಾಗತಿಸಿದರು. ದಯಾನಂದ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.