ಉಡುಪಿ, ನ.1: ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ರವಿವಾರ ನಡೆದ ವೋಟ್ ಬಚಾವೋ-ದೇಶ ಬಚಾವೋ’ ಬೃಹತ್ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಾಯಕರು ಹಾಗೂ ಕಾರ್ಯಕರ್ತರು ಉತ್ಸಾಹದಿಂದ ಭಾಗವಹಿಸಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ನೇತೃತ್ವದಲ್ಲಿ ಅಶೋಕ್ ಕೊಡವೂರು, ಸುನಿಲ್ ಡಿ.ಬಂಗೇರ, ಪ್ರಶಾಂತ್ ಜತ್ತನ್ನ, ರಾಘವೇಂದ್ರ ಶೆಟ್ಟಿ ಕರ್ಜೆ, ಸುಭದ್ರ ರಾವ್, ಗೋಪಿನಾಥ್ ಭಟ್, ಅರವಿಂದ ಪೂಜಾರಿ, ಪ್ರದೀಪ್ ಶೆಟ್ಟಿ, ಕೆದೂರು ಸದಾನಂದ ಶೆಟ್ಟಿ, ಮುರುಳಿ ಶೆಟ್ಟಿ, ರಮೇಶ್ ಕಾಂಚನ್, ಸಂತೋಷ್ ಕುಲಾಲ್ ಸೇರಿದಂತೆ ಉಡುಪಿ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor