ಕುಂದಾಪುರ, ನ.1: ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಕುಂದಾಪುರ, ಲಯನ್ಸ್ ಕ್ಲಬ್ ಕುಂದಾಪುರ ವೆಯ್ಟ್ ಝೋನ್ ಎಸ್‌ಸಿಐ ಕುಂದಾಪುರ ಲಿಜನ್ ಯೂಥ್ ವಿಂಗ್ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜುಗಳ ಸಹಭಾಗಿತ್ವ ದಲ್ಲಿ ನಡೆದ ಉಚಿತ ಅರೋಗ್ಯ ತಪಾಸಣಾ ಶಿಬಿರದಲ್ಲಿ ಸುಮಾರು 250ಕ್ಕಿಂತ ಹೆಚ್ಚು ಮಂದಿ ಪ್ರಯೋಜನ ಪಡೆದು ಕೊಂಡರು.

ಈ ಸಂದರ್ಭದಲ್ಲಿ ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಅಧ್ಯಕ್ಷ ಅಬ್ದುಲ್ ಮುನಾಫ್ ಹಂಗಾರಕಟ್ಟೆ, ಲಯನ್ಸ್ ಜಿಲ್ಲಾ ರಾಜ್ಯಪಾಲ ರಾಜೀವ ಕೋಟ್ಯಾನ್, ವೈದ್ಯರುಗಳಾದ ಡಾ.ರಂಜನ್, ಡಾ.ವಿವೇಕ್ ಮೊದಲಾದವರು ಉಪಸ್ಥಿತ ರಿದ್ದರು. ಪ್ರಧಾನ ಕಾರ್ಯದರ್ಶಿ ಹುಸೇನ್ ಹೈಕಾಡಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು ಪ್ರಾಂಶುಪಾಲ ರಾಮಕೃಷ್ಣ ಹೆಗ್ಡೆ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor