ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ
ಶಿರ್ವ, ನ.1: ಸರಿಯಾದ ಉದ್ಯೋಗ ಇಲ್ಲದ ಕಾರಣ ಮಾನಸಿಕವಾಗಿ ನೊಂದು ಅ.30ರಂದು ರಾತ್ರಿ ಮನೆಯಲ್ಲಿ ಕೀಟನಾಶಕವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಂಟಕಲ್ ಹೆರೂರು ರಸ್ತೆಯ ಜೇಸನ್ ಫ್ಲಾಯಿಡ್ ಫೆರ್ನಾಂಡೀಸ್ (36) ಎಂಬವರು ನ.1ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿ ಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ಬ್ಯಾಂಕಿನಲ್ಲಿ 10ಲಕ್ಷ ರೂ. ಸಾಲ ಮಾಡಿ ಆರಂಭಿಸಿದ ಕ್ಯಾಟರಿಂಗ್ ವ್ಯವಹಾರದಲ್ಲಿ ನಷ್ಟ ಉಂಟಾಗಿರು ವುದರಿಂದ ಮನನೊಂದು ಅ.30ರಂದು ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಜಪ್ತಿ ಗ್ರಾಮದ ಕರಿಕಲ್ ಕಟ್ಟೆ ನಿವಾಸಿ ದಿವಾಕರ ಕೃಷ್ಣ ಶೆಟ್ಟಿ(34) ಎಂಬವರು ಅ.31ರಂದು ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.