ಬ್ರಹ್ಮಾವರ, ನ.2: ವಿಪರೀತ ಮದ್ಯ ಸೇವನೆ ಚಟದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಅ.27ರಂದು ಸಂಜೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬೈಕಾಡಿಯ ಉಮೇಶ್ ಪೂಜಾರಿ(53)ಎಂಬವರು ನ.1ರಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಬೈಲುಹಿತ್ಲು ನಿವಾಸಿ ಗಣೇಶ್ ಪೂಜಾರಿ(54) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಅ.31ರ ಬೆಳಗ್ಗೆಯಿಂದ ನ.1ರ ಬೆಳಗಿನ ಮಧ್ಯಾವಧಿಯಲ್ಲಿ ಬೈಲೂರು ಗ್ರಾಮದ ಬಾಳೆಹಿತ್ಲು ಎಂಬಲ್ಲಿ ಮೊರತ್ತಗುಂಡಿ ಹೊಳೆಯಲ್ಲಿ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor