ರೋಬೋಸಾಫ್ಟ್ ಟೆಕ್ನಾಲಜೀಸ್ನಿಂದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್
ಉಡುಪಿ, ನ.6: ಉಡುಪಿಯ ಪುತ್ತೂರಿನಲ್ಲಿರುವ ರೋಬೋಸಾಫ್ಟ್ ಟೆಕ್ನಾಲಜೀಸ್ ಸಂಸ್ಥೆ ತನ್ನ ಸಿಎಸ್ಆರ್ ನಿಧಿಯ ಮೂಲಕ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ಗಳನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮೂಲಕ ವಿತರಿಸಿದೆ.
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಡಿಜಿಟಲ್ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಈ ನೆರವು ನೀಡಲಾಗಿದ್ದು, ವಿದ್ಯಾರ್ಥಿಗಳು ಲ್ಯಾಪ್ಟಾಪ್ಗಳನ್ನು ಶಿಕ್ಷಣದ ಉದ್ದೇಶಕ್ಕೆ ಸದುಪಯೋಗಪಡಿಸಿಕೊಂಡು ಉತ್ತಮ ಸಾಧನೆ ಮಾಡುವಂತೆ ಸಂಸದರು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ರೋಬೋಸಾಫ್ಟ್ ಟೆಕ್ನಾಲಜೀಸ್ ಸಂಸ್ಥೆ ಸಿಬ್ಬಂದಿಗಳಾದ ನಂದಕಿಶೋರ್, ಶ್ರೀಧರನ್ ಕೇಶವನ್, ಚಕ್ರಿ ಗೌರಿಶಂಕರ್ ಹೆಗ್ಡೆ, ಶರತ್ ಆಚಾರ್ಯ, ಕಾರ್ತಿಕ್ ಅಮೀನ್, ಮಹೇಶ್ ಆಚಾರ್ ಹಾಗೂ ನಾಗೇಶ್ ದೊಂಡ್ಯಾ ಉಪಸ್ಥಿತರಿದ್ದರು.