ಉಡುಪಿ, ನ.7: ಮಣಿಪಾಲ ಮಾಹೆಯ ಮಣಿಪಾಲ್ ಇನಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್‌ನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ವನ್ನು ಸಡಗರದಿಂದ ಆಚರಿಸಲಾಯಿತು.

ಕಾರ್ಯಕ್ರಮವನ್ನು ಎಂಐಸಿಯ ಹಿರಿಯ ಪ್ರಾಧ್ಯಾಪಕ ಪ್ರೊ.ಸಂಜಯ್ ಉದ್ಘಾಟಿಸಿದರು. ಎಂ.ಐ.ಸಿ ನಿರ್ದೇಶಕಿ ಡಾ.ಶುಭಾ ಎಚ್.ಎಸ್ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ವಿವಿಧ ರಾಜ್ಯಗಳ ವಿದ್ಯಾರ್ಥಿಗಳೇ ಹಮ್ಮಿಕೊಂಡ ಈ ಕಾರ್ಯಕ್ರಮದಲ್ಲಿ ಯಕ್ಷಗಾನ ಕಲೆಯನ್ನು ಬಿಂಬಿಸುವ ರಂಗೋಲಿ ಕಣ್ಮನ ಸೆಳೆಯಿತು.

ವಿದ್ಯಾರ್ಥಿ ನಿರೂಪಕರಾದ ದೇವೇಂದ್ರ ಮತ್ತು ವಿದ್ಯಾರ್ಥಿ ನಿರೂಪಕಿ ಸ್ವಸ್ತಿ ಕರ್ನಾಟಕ ರಾಜ್ಯದ ಭಾಷೆ, ಸಂಸ್ಕೃತಿ ಹಾಗೂ ರಾಜ್ಯೋತ್ಸವದ ಪ್ರಾಮುಖ್ಯತೆಯ ಕುರಿತು ವಿವರಿಸಿದರು. ಈ ಸಂದರ್ಭದಲ್ಲಿ ಕನ್ನಡ ಗೀತೆಗಳು, ಯಕ್ಷಗಾನ, ಭರತನಾಟ್ಯ, ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮ ಗಳು ಹಾಗೂ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor