ಪೈಪ್ಲೈನ್ ಬದಲಾವಣೆ ಕಾಮಗಾರಿ: ವಾಹನಗಳ ಸಂಚಾರಕ್ಕೆ ನಿಷೇಧ
ಸಾಂದರ್ಭಿಕ ಚಿತ್ರ
ಉಡುಪಿ, ನ.7: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ ಜಾಲದ ಪೈಪ್ಲೈನ್ ಬದಲಾವಣೆ ಮಾಡಿ ಕಾಂಕ್ರೀಟ್ ಚೇಂಬರ್ ನಿರ್ಮಾಣ ಕಾಮಗಾರಿಯನ್ನು ನವೆಂಬರ್ 11ರಿಂದ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ, ಬದಲಿ ವ್ಯವಸ್ಥೆ ಯನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಪ್ರಕಟಣೆ ಮನವಿ ಮಾಡಿದೆ.