ಉಡುಪಿ : ಪೆರಂಪಳ್ಳಿ ಪರ್ವ ಫ್ರೆಂಡ್ಸ್ ನೇತೃತ್ವದಲ್ಲಿ ನೇತೃತ್ವದಲ್ಲಿ ಪೆರಂಪಳ್ಳಿ ಚರ್ಚ್ ವೃತ್ತದ ಬಳಿ ಸಂಭವಿಸುತ್ತಿರುವ ಅಪಘಾತಗಳನ್ನು ತಡೆಗಟ್ಟುವ ಹಾಗೂ ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ದಾನಿಗಳಾದ ಪೆರಂಪಳ್ಳಿ ಅನಿಶ್ ಜನರಲ್ ಸ್ಟೋರ್ಸ್‌, ಪೆರಂಪಳ್ಳಿ ಯೂನಿಯನ್ ಬ್ಯಾಂಕ್, ಹಾಗೂ ಟ್ರಿನಿಟಿ ಸೆಂಟ್ರಲ್ ಸ್ಕೂಲ್‌ಗಳ ಸಹಕಾರ ದಿಂದ ಒಟ್ಟು 6 ಬ್ಯಾರಿಕೇಡ್‌ಗಳನ್ನು ಪೊಲೀಸ್ ಇಲಾಖೆಗೆ ಹಸ್ತಾಂತರ ಕಾರ್ಯಕ್ರಮ ಇಂದು ನಡೆಯಿತು.

ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ಫಾತಿಮಾ ಮಾತೆ ಚರ್ಚ್‌ನ ಧರ್ಮಗುರು ರೆ.ಫಾ.ರೆಜಿನೋಲ್ಡ್ ಪಿಂಟೋ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಣಿಪಾಲ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಹಾಗೂ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪರ್ವ ಫ್ರೆಂಡ್ಸ್ ಅಧ್ಯಕ್ಷರಾದ ಅನಿಲ್ ಗೊನ್ಸಲ್ವಿಸ್, ಪೆರಂಪಳ್ಳಿ ರಿಕ್ಷಾ ಚಾಲಕ ಮಾಲಕ ಸಂಘದ ಸದಸ್ಯರು, ಸ್ಥಳೀಯ ಸಂಘ ಸಂಸ್ಥೆಯ ಅಧ್ಯಕ್ಷರು ಹಾಗೂ ಸರ್ವ ಸದ್ಯಸರು, ಊರಿನ ನಾಗರೀಕರು ಉಪಸ್ಥಿತರಿದ್ದರು. ಕೃಷಿಕ ಸಂಘದ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಶ್ರೀಯಾನ್ ನಿರೂಪಿಸಿ, ಸ್ವಾಗತಿಸಿ ಹಾಗೂ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor