ಉಡುಪಿ, ನ.9: ನಗರದ ಕಲ್ಸಂಕ ಅಂಬಾಗಿಲು ರಸ್ತೆಯ ಗುಂಡಿಬೈಲಿ ನಲ್ಲಿರುವ ಸಾನ್ವಿ ಟ್ರೇಡರ್ಸ್‌ನಲ್ಲಿ ವಿವಿಧ ಹುದ್ದೆಗಳಿಗೆ ನವೆಂಬರ್ 13ರಂದು ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಪಿಯುಸಿ, ಐಟಿಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉಡುಪಿ ಅಥವಾ ದೂರವಾಣಿ ಸಂಖ್ಯೆ: 8105618291, 9945856670, 9901472710, 8150961875ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor