ಕೋಟ, ನ.9: ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕು ಗುಂಡ್ಮಿ ಗ್ರಾಮದ ಸಾಸ್ತಾನ ಸರಕಾರಿ ಆಸ್ಪತ್ರೆ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನ.9ರಂದು ನಡೆದಿದೆ.

ಮೃತರನ್ನು ಐರೋಡಿ ಗ್ರಾಮದ ಟೆಲಿಫೋನ್ ಎಕ್ಸಚೇಂಜ್ ಬಿಲ್ಡಿಂಗ್ ನಿವಾಸಿ ಹೆನ್ರಿ ಫೆರ್ನಾಂಡಿಸ್ (75) ಎಂದು ಗುರುತಿಸಲಾಗಿದೆ. ಇವರು ಬೆಳಗ್ಗೆ ಮನೆಯಿಂದ ಸಾಸ್ತಾನ ಸಂತ ಅಂತೋನಿ ಚರ್ಚಿನಲ್ಲಿ ನಡೆಯುವ ಪೂಜೆಗೆ ನಡೆದುಕೊಂಡು ಹೊರಟಿದ್ದರು. ಈ ವೇಳೆ ಬ್ರಹ್ಮಾವರದಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಸ್ಕೂಟರ್ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಹೆನ್ರಿ ಫೆರ್ನಾಂಡಿಸ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರು, ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ ವೇಳೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor