ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ
ಕಾರ್ಕಳ, ನ.9: ಮುಡಾರು ಗ್ರಾಮದ ಹಡ್ಯಾಲು ನಿವಾಸಿ ಬೇಬಿ(56) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ನ.9ರಂದು ಬೆಳಗ್ಗೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ: ಅನಾರೋಗ್ಯದಿಂದ ಬಳಲುತ್ತಿದ್ದ ಆರೂರು ಗ್ರಾಮದ ಬೆಳ್ಮಾರು ನಿವಾಸಿ ಶಂಕರ ಪೂಜಾರಿ(44) ಎಂಬವರು ಜೀವನದಲ್ಲಿ ಜೀಗುಪ್ಸೆಗೊಂಡು ನ.9ರಂದು ನಸುಕಿನ ವೇಳೆ ಮನೆಯ ಎದುರು ಇರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ಕುಡಿತದ ಚಟ ಹೊಂದಿದ್ದ ನಂದಳಿಕೆ ಗ್ರಾಮದ ವಿಠಲ ಆಚಾರ್ಯ(60) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ನ.7ರಂದು ರಾತ್ರಿ ವೇಳೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.