ಉಚಿತ ನೇತ್ರ ತಪಾಸಣಾ - ಶಸ್ತ್ರಚಿಕಿತ್ಸಾ ಶಿಬಿರ
ಉಡುಪಿ, ನ.15: ಮುಂಬೈ ಕಮಲ್ ಎ.ಬಾಳಿಗ ಚಾರಿಟೇಬಲ್ ಟ್ರಸ್ಟ್, ಉಡುಪಿ ಡಾ. ಎ.ವಿ.ಬಾಳಿಗ ಮೆಮೋರಿಯಲ್ ಆಸ್ಪತ್ರೆ, ದೊಡ್ಡಣಗುಡ್ಡೆ ಅಶ್ವತ್ಥಗಟ್ಟೆ ಸೇವಾ ಸಮಿತಿ, ಓನ್ ಗುಡ್ ಸ್ಟೆಪ್ ಬೆಂಗಳೂರು, ಮೆಸಿಲಿ ಇಂಡಿಯಾ ಪ್ಯಾಕೇಜಿಂಗ್ ಪ್ರೈವೇಟ್ ಲಿಮಿಟೆಡ್ ಹಿರಿಯಡ್ಕ, ಜೆನೆಸಿಸ್ ಪ್ಯಾಕೇಜಿಂಗ್ ಪ್ರೈವೇಟ್ ಲಿಮಿಟೆಡ್ ಹಿರಿ ಯಡ್ಕ ಹಾಗೂ ಜ್ಯೋತಿ ಸ್ಟ್ರಕ್ಚರ್ಸ್ ಲಿಮಿಟೆಡ್, ಮುಂಬೈ ಇವರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣಾ ಮತ್ತು ಶಸ್ತ್ರಚಿಕಿತ್ಸಾ ಶಿಬಿರವನ್ನು ಡಾ.ಎ.ವಿ.ಬಾಳಿಗ ಮೆಮೋರಿಯಲ್ ಆಸ್ಪತ್ರೆಯಲ್ಲಿ ರವಿವಾರ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಅಶ್ವತ್ಥಗಟ್ಟೆ ಸೇವಾ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿಗಾರ್ ಹಾಗೂ ಆಸ್ಪತ್ರೆಯ ನೇತ್ರತಜ್ಞೆ ಡಾ.ಲಾವಣ್ಯ ಉದ್ಘಾಟಿಸಿದರು. ನಂತರ ಡಾ.ಲಾವಣ್ಯ, ಕಣ್ಣಿನ ಮಹತ್ವ, ಕಣ್ಣಿನ ಆರೋಗ್ಯದ ಕಾಳಜಿ, ವಿವಿಧ ಕಣ್ಣಿನ ಸಮಸ್ಯೆಗಳು ಹಾಗೂ ಅವುಗಳ ಚಿಕಿತ್ಸಾ ವಿಧಾನಗಳ ಕುರಿತು ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಅಶ್ವತ್ಥಗಟ್ಟೆ ಸೇವಾ ಸಮಿತಿಯ ಹಿರಿಯ ಸದಸ್ಯರಾದ ಲೀಲಾ ಪೂಜಾರಿ, ಸೀತಾರಾಂ ಶೆಟ್ಟಿಗಾರ್ ಹಾಗೂ ಆಸ್ಪತ್ರೆಯ ಸಮಾಜ ಕಾರ್ಯಕರ್ತ ಸುಧಾಕರ್ ಪೂಜಾರಿ ಉಪಸ್ಥಿತರಿದ್ದರು. ಆಸ್ಪತ್ರೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪ್ರಮೀಳಾ ಡಿಸೋಜ ಸ್ವಾಗತಿಸಿದರು. ಕೀರ್ತಿ ಎಸ್. ಕಾರ್ಯಕ್ರಮ ನಿರೂಪಿಸಿದರು. ಆಸ್ಪತ್ರೆಯ ಸಿಬ್ಬಂದಿ ಐಕಳ ಅನಿಲ್ ವಂದಿಸಿದರು.
ಈ ಶಿಬಿರದ ಮೂಲಕ ಸಾರ್ವಜನಿಕರಿಗೆ ಉಚಿತ ನೇತ್ರ ತಪಾಸಣೆ ಹಾಗೂ ಅಗತ್ಯವಿರುವವರಿಗೆ ಉಚಿತ ನೇತ್ರ ಶಸ್ತ್ರಚಿಕಿತ್ಸೆಯ ಸೌಲಭ್ಯವನ್ನು ಒದಗಿಸುವ ಮೂಲಕ ಕಣ್ಣಿನ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಮಹತ್ವದ ಉದ್ದೇಶವನ್ನು ಹೊಂದಲಾಗಿತ್ತು.