ಉಡುಪಿ, ನ.19: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಸಾರ್ವಜನಿಕ ಆಸ್ಪತ್ರೆ ಕುಂದಾಪುರ ಹಾಗೂ ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಅಭಿಯಾನ-2026, ರಾಷ್ಟ್ರೀಯ ನವಜಾತ ಶಿಶು ಸಪ್ತಾಹ -2026 ಮತ್ತು ನ್ಯೂಮೋನಿಯವನ್ನು ಯಶಸ್ವಿಯಾಗಿ ತಟಸ್ಥಗೊಳಿಸಲು ಸಾಮಾಜಿಕ ಜಾಗೃತಿ ಮತ್ತು ಕ್ರಿಯಾ ಅಭಿಯಾನದ ಜಿಲ್ಲಾಮಟ್ಟದ ಉದ್ಘಾಟನಾ ಕಾರ್ಯಕ್ರಮ ಇಂದು ಕುಂದಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಜ್ಯೋತ್ಸ್ನಾ ಬಿ.ಕೆ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ ಅವರು ಕಾರ್ಯಕ್ರಮದ ಉದ್ದೇಶ, ಮಕ್ಕಳ ಆರೋಗ್ಯದ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹಾಗೂ ನ್ಯೂಮೋನಿಯವನ್ನು ಯಶಸ್ವಿ ಯಾಗಿ ತಟಸ್ಥಗೊಳಿಸಲು ಸಾಮಾಜಿಕ ಜಾಗೃತಿ ಮತ್ತು ಕ್ರೀಯಾಯೋಜನೆ ಗಳನ್ನು ಯಾವ ರೀತಿ ಅನುಸರಿಸಬೇಕು ಎಂಬುದನ್ನು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಮಕ್ಕಳ ತಜ್ಞ ಡಾ.ಕಶ್ಯಪ್ ಶೆಟ್ಟಿ ಹಾಗೂ ಇಎನ್‌ಟಿ ತಜ್ಞೆ ಡಾ. ವೀಣಾ ಕುಮಾರಿ ಕಾರ್ಯಕ್ರಮಗಳ ಕುರಿತು ವಿವರವಾದಜ ಮಾಹಿತಿಗಳನ್ನು ನೀಡಿದರು.

ಕಾರ್ಯಕ್ರಮದಲ್ಲಿ ಫಿಸಿಶಿಯನ್ ಡಾ.ನಾಗೇಶ್, ಶಸ್ತ್ರಚಿಕಿತ್ಸಕ ಡಾ. ಮಹೇಂದ್ರ ಶೆಟ್ಟಿ, ಡಿಪಿಸಿ- ಆರ್.ಸಿ.ಹೆಚ್ ಸುಧೀಂದ್ರ ಉಪಸ್ಥಿತರಿದ್ದರು. ಆಪ್ತ ಸಮಾಲೋಚಕಿ ಸುಗಂಧಿ ಸ್ವಾಗತಿಸಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಹೆಚ್ ಕಾರ್ಯಕ್ರಮ ನಿರೂಪಿಸಿದರು.ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಹೆಚ್ ನಾಯ್ಕರ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor