ಉಡುಪಿ, ನ.21: ಉಡುಪಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶವನ್ನು ಹಮ್ಮಿಕೊಂಡಿದ್ದು ಇದಕ್ಕೆ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ಅಪಸ್ವರ ಪ್ರಾಂಭವಾಗಿರುವುದು ಖಂಡನೀಯ ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರದ ನೇತೃತ್ವದಲ್ಲಿ ಆಯೋಜಿಸಿರುವ ಗ್ಯಾರಂಟಿ ಯೋಜನೆಗಳ ಸಮಾವೇಶ ಕಾರ್ಯಕ್ರಮವು ಕೇವಲ ಸರಕಾರಿ ಕಾರ್ಯಕ್ರಮವಾಗಿರುತ್ತದೆ ಎಂಬುದನ್ನು ಶಾಸಕರು ಅರ್ಥ ಮಾಡಬೇಕು. ಸರಕಾರಿ ಹಣದಲ್ಲಿ ತಮ್ಮ ರಾಜಕೀಯ ಪ್ರೇರಿತ ಕಾರ್ಯಕ್ರಮ ಮಾಡುತ್ತಾ ಬಂದ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರಿಗೆ ತಮ್ಮ ರಾಜಕೀಯ ಪ್ರಚಾರಕ್ಕೆ ನಡೆಸಿದ ಕಾರ್ಕಳ ಉತ್ಸವ, ಬೈಂದೂರು ಉತ್ಸವ, ಕಾಪು ಬೀಚ್ ಉತ್ಸವ, ಪರಶುರಾಮನ ಥೀಮ್ ಪಾರ್ಕ್ ಉದ್ಘಾಟನಾ ಸಮಾರಂಭಕ್ಕೆ ಎಲ್ಲಿಂದ ಹಣ ಸಂಗ್ರಹವಾಗಿತ್ತು ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.

ಜನಸಾಮಾನ್ಯರ ಪರವಾಗಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಪಕ್ಷ ಹಾಗೂ ಬಿಜೆಪಿ ಶಾಸಕರು ಇನ್ನಾ ದರೂ ತಮ್ಮ ಸಹಮತ ತೋರಲು ಭಗವಂತನು ಬುದ್ಧಿ ಶಕ್ತಿಯನ್ನು ಕರುಣಿಸಲಿ ಹಾಗೂ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿರುವ ಬಿಜೆಪಿ ಶಾಸಕರಿಗೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಮುಂದಿನ ಎಲ್ಲಾ ಚುನಾವಣೆ ಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ರಮೇಶ್ ಕಾಂಚನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor