ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ
ಉಡುಪಿ, ನ.21: ಜಿಲ್ಲೆಯ ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎರ್ಲಪಾಡಿ ಗ್ರಾಮದ ಪ್ರದೇಶದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಹ ಸಂಘ- ಸಂಸ್ಥೆಗಳು ಹಾಗೂ ಇತರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 20ರವರೆಗೆ ಅವಕಾಶವಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾರ್ಕಳ ತಾಲೂಕು ತಹಶೀಲ್ದಾರರ ಕಚೇರಿ ಅಥವಾ ಉಪ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ರಜತಾದ್ರಿ, ಮಣಿಪಾಲ ಇವರ ಕಚೇರಿಯನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಕಟಣೆ ತಿಳಿಸಿದೆ.