ಕೋಟ, ನ.22: ಮುಂದಿನ ತಲೆಮಾರಿಗೆ ಪರಿಸರವನ್ನು ಉಳಿಸುವುದು ನಮ್ಮ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ನಾವೆಲ್ಲ ಮುಂದುವರೆಯಬೇಕು ಎಂದು ಶ್ರೀ ಕೃಷ್ಣಪ್ರಸಾದ್ ಗ್ರೂಪ್ಸ್ ಮುಖ್ಯಸ್ಥ ಸಂಪತ್ ಕುಮಾರ್ ಶೆಟ್ಟಿ ಹೇಳಿದ್ದಾರೆ.

ಪಂಚವರ್ಣ ಯುವಕ ಮಂಡಲ ಮತ್ತು ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾ ನಂದ ಫೌಂಡೇಶನ್ ಮಣೂರು, ಕೋಟತಟ್ಟು ಗ್ರಾಮ ಪಂಚಾಯತ್, ಸಿಂಧೂರ ಸಂಜೀವಿನಿ ಒಕ್ಕೂಟ ಇವರ ಸಹಯೋಗದೊಂದಿಗೆ ಕೋಟತಟ್ಟು ಪಡುಕರೆ ಬೀಚ್‌ನಲ್ಲಿ 325ನೇ ವಾರದ ಪರಿಸರಸ್ನೇಹಿ ಸ್ವಚ್ಛತಾ ಅಭಿಯಾನಕ್ಕೆ ರವಿವಾರ ಚಾಲನೆ ನೀಡಿ ಅವರು ಮಾತನಾಡುತಿದ್ದರು.

ಕೆ.ಎಂ.ಎಫ್ ನಿರ್ದೇಶಕ ಶಿವಮೂರ್ತಿ ಉಪಾಧ್ಯಾಯ ಮಾತನಾಡಿ ಮುಂದಿನ ತಲೆಮಾರಿಗಾಗಿ ಪ್ರಕೃತಿಯನ್ನು ಉಳಿಸಿ ಬೆಳೆಸುವ ಕಾಯಕ ನಮ್ಮಿಂದಾಗಬೇಕು. ಪ್ರಕೃತಿ ಮಲಿನಗೊಳಿಸುವ ಕಾರ್ಯ ಇನ್ನಾದರೂ ನಿಲ್ಲಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಮುದ್ರತಟದಿಂದ ಸುಮಾರು ಪ್ಲಾಸ್ಟಿಕ್ ತ್ಯಾಜ್ಯ, ಮದ್ಯದ ಬಾಟಲಿ ಸೇರಿದಂತೆ ಅನೇಕ ರೀತಿಯ ತ್ಯಾಜ್ಯಗಳನ್ನು ತೆರವುಗೊಳಿಸಲಾಯಿತು. ಸ್ವಚ್ಛತಾ ಅಭಿಯಾನದ ಮುಂದಾಳತ್ವವನ್ನು ಪಂಚವರ್ಣ ಯುವಕ ಮಂಡಲದ ಸಂಚಾಲಕ ಅಮೃತ್ ಜೋಗಿ ವಹಿಸಿದ್ದರು.

ಈ ಸಂದರ್ಭದಲ್ಲಿ ಸಂಜೀವಿನಿ ಒಕ್ಕೂಟದ ಶ್ಯಾಮಲ ಸಿ ಪುತ್ರನ್, ಪಂಚವರ್ಣ ಮಹಿಳಾ ಮಂಡಲದ ಸವಿತಾ ನಾಗರಾಜ್, ಯುವಕ ಮಂಡಲದ ಉಪಾಧ್ಯಕ್ಷ ದಿನೇಶ್ ಆಚಾರ್ಯ, ಪೂರ್ವಾಧ್ಯಕ್ಷ ಗಿರೀಶ್ ಆರ್ಚಾ ಮೊದಲಾದ ವರು ಉಪಸ್ಥಿತರಿದ್ದರು. ಸದಸ್ಯರಾದ ಪ್ರಭಾಕರ್ ಮಣೂರು ಕಾರ್ಯಕ್ರಮ ನಿರೂಪಿಸಿ, ರವೀಂದ್ರ ಕೋಟ ಸಂಯೋಜಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor