ಉಡುಪಿ, ನ.22: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ ಮತ್ತು ಫಲಾನುಭವಿ ಗಳೊಂದಿಗೆ ನೇರ ಸಂವಾದ ನಡೆಸುವ ನಿಟ್ಟಿನಲ್ಲಿ ನ.24ರಂದು ಉಡುಪಿಯಲ್ಲಿ ನಡೆಯಲಿರುವ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮಾಹಿತಿ ಕಾರ್ಯಾಗಾರ ಹಾಗೂ ಫಲಾನುಭವಿಗಳ ಸಂಭ್ರಮೋತ್ಸವ’ದಲ್ಲಿ ಫಲಾನು ಭವಿಗಳು ಮುಕ್ತ ಮನಸ್ಸಿನಿಂದ ಪಾಲ್ಗೊಳ್ಳಬೇಕು. ಕಾರ್ಯಕ್ರಮದ ಕುರಿತು ಉಡುಪಿ ಜಿಲ್ಲಾ ಬಿಜೆಪಿ ಶಾಸಕರ ಹೇಳಿಕೆ ಬಾಲಿಶತನದಿಂದ ಕೂಡಿದ್ದು ಸರಕಾರದ ಯೋಜನೆಗಳು ಬಡವರ್ಗದ ಜನರನ್ನು ತಲುಪುವುದನ್ನು ಸಹಿಸಲಾಗದೆ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ವಿಧಾನ ಪರಿಷತ್ ಮುಖ್ಯ ಸಚೇತಕ ಮಂಜುನಾಥ ಭಂಡಾರಿ ಹೇಳಿದ್ದಾರೆ.

ರಾಜ್ಯ ಸರಕಾರದ ಐದು ಯೋಜನೆಗಳಾದ ಶಕ್ತಿ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ ಮತ್ತು ಯುವ ನಿಧಿ ಯೋಜನೆಗಳ ಫಲಾನುಭವಿಗಳನ್ನು ಒಂದೇ ವೇದಿಕೆಯಡಿ ಸೇರಿಸಿ, ಯೋಜನೆಗಳ ಮಾಹಿತಿ ನೀಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಹೀಗಿರುವಾಗ ಇದಕ್ಕೆ ಗ್ರಾಮ ಪಂಚಾಯತ್ ಗಳ ತೆರಿಗೆಯ ಹಣ ಬಳಸ ಲಾಗುತ್ತಿದೆ ಎಂದು ಉಡುಪಿ ಜಿಲ್ಲೆಯ ಶಾಸಕರುಗಳು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿರುವುದು ಅವರ ಅಲ್ಪಜ್ಞಾನಕ್ಕೆ ಉದಾಹರಣೆಯಾಗಿದೆ ಎಂದರು.

ಗ್ರಾಮ ಪಂ.ಗಳಿಂದ ತೆಗೆದುಕೊಳ್ಳುವ 25,000 ರೂ. ಹಣವನ್ನು ಸಮಾವೇಶಕ್ಕೆ ಬರುವ ಜನರಿಗೆ ಸೌಲಭ್ಯ ಒದಗಿ ಸಲು, ಯೋಜನೆ ಬಗ್ಗೆ ತಿಳಿಸಲು ಅಗತ್ಯ ಖರ್ಚುಗಳಿಗೆ ವಿನಿಯೋಗಿಸಲಾಗುತ್ತದೆಯೇ ಹೊರತು ಯಾವುದೇ ರೀತಿಯಲ್ಲಿ ದುಂಧುವೆಚ್ಚ ಮಾಡುತ್ತಿಲ್ಲ. ಮತದಾರರ ಗಮನವನ್ನು ಬೇರೆಡೆ ಸೆಳೆಯಲು ಇಂತಹ ಹೇಳಿಕೆ ಕೊಡುತ್ತಿ ರುವ ಉಡುಪಿ ಜಿಲ್ಲಾ ಬಿಜೆಪಿ ನಾಯಕರುಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲವಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor