ಕುಂದಾಪುರ, ನ.22: ಕಣ್ಣಿನ ಆರೋಗ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಇಂತಹ ಉಚಿತ ತಪಾಸಣಾ ಶಿಬಿರಗಳು ಗ್ರಾಮೀಣ ಭಾಗದ ಜನರಿಗೆ ಅತ್ಯಂತ ಉಪಯುಕ್ತ. ಸಮಯಕ್ಕೆ ಸರಿಯಾಗಿ ಕಣ್ಣಿನ ತಪಾಸಣೆ ಮಾಡಿಸಿಕೊಂಡರೆ ಅನೇಕ ಸಮಸ್ಯೆಗಳನ್ನು ಆರಂಭದಲ್ಲೇ ತಡೆಯಬಹುದು ಎಂದು ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದ್ದಾರೆ.

ವಕ್ವಾಡಿ ಫ್ರೆಂಡ್ಸ್ ವಕ್ವಾಡಿ ನೇತೃತ್ವದಲ್ಲಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಒನ್ ಸೈಟ್ ಎಸ್ಸಿಲಾರ್ ಲಕ್ಸೂಟಿಕಾ ಫೌಂಡೇಶನ್ ಬೆಂಗಳೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊರ್ಗಿ ಇವರ ಸಂಯುಕ್ತ ಆಶ್ರಯದಲ್ಲಿ ವಕ್ವಾಡಿಯ ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾದ ಆರೋಗ್ಯ ಸ್ಪಂದನ 2026’ ಉಚಿತ ನೇತ್ರ ತಪಾಸಣಾ ಶಿಬಿರವನ್ನು ರವಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಸಂಸ್ಥೆಯ ಅಧ್ಯಕ್ಷ ಕೃಷ್ಣ ಶೆಟ್ಟಿಗಾರ್ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ, ನೇತ್ರತಜ್ಞ ಡಾ.ಕೃಷ್ಣಪ್ರಸಾದ್ ಕೂಡ್ಲು, ಧರ್ಮಪ್ರಸಾದ್ ರೈ ಎ., ಕ್ಯಾನ್ಸರ್ ತಜ್ಞ ಡಾ.ಸಂತೋಷ್ ಕುಲಾಲ್, ಶಾಲೆಯ ಮುಖ್ಯೋಪಾಧ್ಯಾಯಿನಿ ಭಾರತಿ ಎನ್., ವಕ್ವಾಡಿ ಫ್ರೆಂಡ್ಸ್ ವಕ್ವಾಡಿ ಮಹಿಳಾ ಮಂಡಳಿ ಅಧ್ಯಕ್ಷೆ ನಾಗರತ್ನ, ಕೊರ್ಗಿ ಸಿಎಚ್‌ಒ ಮೇದನಿ ಉಪಸ್ಥಿತರಿದ್ದರು.

ಸಂಸ್ಥೆಯ ಪ್ರಮುಖರಾದ ಕೀರ್ತಿ ಶೆಟ್ಟಿ ವಕ್ವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸತೀಶ್ ಪೂಜಾರಿ ವಕ್ವಾಡಿ ನಿರೂಪಿಸಿದರು. ದೇವಿಪ್ರಸಾದ್ ಶೆಟ್ಟಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor