ಬಂಟಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಪ್ರಾಜೆಕ್ಟ್ ಪ್ರದರ್ಶನ
ಉಡುಪಿ, ನ.23: ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಪಠ್ಯೇತರ ಚಟುವಟಿಕಾ ಘಟಕ, ಹವ್ಯಾಸಿ ಪ್ರಾಜೆಕ್ಟ್ ಕ್ಲಬ್, ಐ.ಎಸ್.ಟಿ.ಇ ವಿದ್ಯಾರ್ಥಿ ಘಟಕದ ಸಹಯೋಗದೊಂದಿಗೆ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರಾಜೆಕ್ಟ್ ಸ್ಪರ್ಧೆ ಮತ್ತು ಪ್ರದಶ9ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಥಿ9ಗಳಿಂದ ಪ್ರಾಜೆಕ್ಟ್ ಪ್ರದರ್ಶನವನ್ನು ಕಾಲೇಜಿನ ಆವರಣದಲ್ಲಿ ನ.20ರಂದು ಆಯೋಜಿಸಲಾಗಿತ್ತು.
ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ, ವಿದ್ಯುನ್ಮಾನ ಮತ್ತು ಸಂವಹನ ವಿಭಾಗ, ಸಿವಿಲ್ ಇಂಜಿನಿಯರಿಂಗ್ ವಿಭಾಗ, ಗಣಕಯಂತ್ರ ವಿಭಾಗ, ಕೃತಕ ಬುದ್ಧಿಮತ್ತೆ ಮತ್ತು ದತ್ತಾಂಶ ವಿಜ್ಞಾನ ವಿಭಾಗ ಹಾಗೂ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕಾ ವಿಭಾಗದಿಂದ ಒಟ್ಟು 100ಕ್ಕೂ ಹೆಚ್ಚು ಪ್ರಾಜೆಕ್ಟ್ಗಳು ಪ್ರದರ್ಶನಗೊಂಡವು.
ಈ ಪ್ರಾಕ್ಟ್ಗಳು ಕೃತಕ ಬುದ್ಧಿಮತ್ತೆ, ಇಂಟರ್ನೆಟ್ ಆಫ್ ಥಿಂಗ್ಸ್, ಆರೋಗ್ಯ ಸೇವೆ, ಸೈಬರ್ ಭದ್ರತೆ, ಸುಸ್ಥಿರ ಇಂಜಿನಿಯರಿಂಗ್, ಸ್ಮಾರ್ಟ್ ಕೃಷಿ, ನವೀಕರಿಸಬಹುದಾದ ಇಂಧನ, ವಿಪತ್ತು ನಿರ್ವಹಣೆ ಮತ್ತು ಪರಿಸರ ಮೇಲ್ವಿಚಾರಣೆ ಸೇರಿದಂತೆ ವಿವಿಧ ಕ್ಷೇತ್ರಗಳನ್ನು ಒಳಗೊಂಡಿದ್ದವು.
ವಿದ್ಯಾರ್ಥಿಗಳು ತಮ್ಮ ತಾಂತ್ರಿಕ ಜ್ಞಾನ, ಸೃಜನಶೀಲತೆ ಮತ್ತು ಸಮಸ್ಯೆಗಳನ್ನು ಪರಿಹರಿಸುವ ಸಾಮರ್ಥ್ಯವನ್ನು ಕಾರ್ಯನಿರ್ವಹಿಸುವ ಮಾದರಿಗಳು, ನೇರ ಪ್ರಾತ್ಯಕ್ಷಿಕೆಗಳು ಹಾಗೂ ಪ್ರಸ್ತುತಿಗಳ ಮೂಲಕ ಪ್ರದರ್ಶಿಸಿದರು.
ಕಾಲೇಜಿನ ಶೈಕ್ಷಣಿಕ ಡೀನ್ ಡಾ.ಸುದರ್ಶನ್ ರಾವ್, ವಿವಿಧ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು ಪ್ರದರ್ಶನಕ್ಕೆ ಭೇಟಿ ನೀಡಿ, ವಿದ್ಯಾರ್ಥಿ ಗಳೊಂದಿಗೆ ಸಂವಾದ ನಡೆಸಿ, ಅಗತ್ಯ ಸಲಹೆಗಳನ್ನು ನೀಡಿದರು. ಪ್ರದರ್ಶಿಸಲಾದ ಪ್ರಾಜೆಕ್ಟ್ಗಳಲ್ಲಿ ಎರಡು ಅತ್ಯುತ್ತಮ ಪ್ರಾಜೆಕ್ಟ್ಗಳಿಗೆ ಹಾಗೂ ಅತ್ಯುತ್ತಮ ವಿಡಿಯೋಗಳಿಗೆ ನಗದು ಬಹುಮಾನ ನೀಡಲು ಆಯ್ಕೆ ಮಾಡಲಾಯಿತು.