×
Ad

ಲೋಕಸಭಾ ಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಮೊದಲ ದಿನ 1 ನಾಮಪತ್ರ

Update: 2024-03-28 20:38 IST

ಉಡುಪಿ: 2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಇಂದು ಒಂದು ನಾಮಪತ್ರದ ಸಲ್ಲಿಕೆಯಾಗಿದ್ದು, ಬಹುಜನ ಸಮಾಜ ಪಾರ್ಟಿಯ ಕೆ.ಟಿ.ರಾಧಾಕೃಷ್ಣ ಅವರು ತನ್ನ ನಾಮಪತ್ರ ಸಲ್ಲಿಸಿದ್ದಾರೆ.

ಚಿಕ್ಕಮಗಳೂರು ಬಹುಜನ ಸಮಾಜ ಪಾರ್ಟಿಯ ಜಿಲ್ಲಾ ಅಧ್ಯಕ್ಷರೂ ಆಗಿರುವ ಚಿಕ್ಕಮಗಳೂರು ಜಿಲ್ಲೆ ಶಂಕರಪುರದ ಕೆ.ಟಿ.ರಾಧಾಕೃಷ್ಣ (65) ಅವರು ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಜಾಕೀರ್ ಹುಸೇನ್ ಸೇರಿದಂತೆ ರಾಜ್ಯ ಹಾಗೂ ಜಿಲ್ಲಾ ಘಟಕಗಳ ಪದಾಧಿಕಾರಿಗಳೊಂದಿಗೆ ಬಂದು ತಮ್ಮ ನಾಮಪತ್ರವನ್ನು ಸಲ್ಲಿಸಿದರು.

ಗುಡ್‌ಫ್ರೈಡೆ ನಿಮಿತ್ತ ಮಾ.29 ರಜಾ ದಿನವಾಗಿದ್ದು, ನಾಮಪತ್ರ ಸಲ್ಲಿಕೆ ಇರುವುದಿಲ್ಲ. ನಾಮಪತ್ರ ಸಲ್ಲಿಸಲು ಎ.4 ಕೊನೆಯ ದಿನವಾಗಿದೆ. ಎಪ್ರಿಲ್ 5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಎ.8ರಂದು ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿರುತ್ತದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News