ಮಣಿಪಾಲ, ಆ.31: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ಇದರ ಘಟಕವಾಗಿರುವ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸಾಯನ್ಸಸ್, ಹ್ಯುಮಾನಿಟೀಸ್ ಆ್ಯಂಡ್ ಆರ್ಟ್ಸ್ (ಮಿಶ) ವಿಭಾಗದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಕೇಂದ್ರ ಸಿಕೆಆರ್‌ಎಲ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಸಹಭಾಗಿತ್ವದಲ್ಲಿ ‘ತುಳು ಸಂಭಾಷಣ ಕಲಿಕೆ ತರಗತಿ’ ಶೈಕ್ಷಣಿಕ ಕಾರ್ಯಕ್ರಮನ್ನು ಆಯೋಜಿಸು ತ್ತಿದ್ದು ಇದರ ಉದ್ಘಾಟನೆ ಸೆಪ್ಟೆಂಬರ್ 1ರಂದು ಸಂಜೆ 5:30ಕ್ಕೆ ನಡೆಯಲಿದೆ.

ಉಡುಪಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಳಾದ ಪ್ರತೀಕ್ ಬಾಯಲ್ ತುಳು ಕಲಿಕಾ ತರಗತಿ ಉದ್ಘಾಟಿಸಲಿದ್ದಾರೆ. ಮಿಶದ ನಿರ್ದೇಶಕರಾದ ಪ್ರೊ.ಗಾಯತ್ರಿ ಪ್ರಭು ಅಧ್ಯಕ್ಷತೆ ವಹಿಸಲಿದ್ದಾರೆ.

ಸಮಾರಂಭದಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಸಂತೋಷ್ ಶೆಟ್ಟಿ ಹಿರಿಯಡಕ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಾಹೆ ಪ್ರಾದೇಶಿಕ ಭಾಷೆ, ಸಂಸ್ಕೃತಿ, ಸಮುದಾಯಗಳ ಅಧ್ಯಯನ- ಸಂಶೋಧನೆಗೆ ಆದ್ಯತೆ ನೀಡುತಿದ್ದು, ತುಳು ಭಾಷೆಯ ಕಲಿಕಾ ತರಗತಿ ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳಿಗೆ ಪೂರಕ ವಾಗಿರುತ್ತದೆ ಎಂದು ಮಾಹೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor