ಮನೆಗೊಂದು ಗ್ರಂಥಾಲಯ: 10 ಗ್ರಂಥಾಲಯಗಳ ಅನುಷ್ಠಾನ

Update: 2026-08-05 18:28 IST

ಉಡುಪಿ: ಉಡುಪಿ ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಇದರ ವತಿಯಿಂದ ನಡೆಯುತ್ತಿರುವ ಮನೆಗೊಂದು ಗ್ರಂಥಾಲಯ ಅಭಿಯಾನ ಉಡುಪಿ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಸಹಯೋಗ ದೊಂದಿಗೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ.

ಒಂದೇ ದಿನ 10 ಗ್ರಂಥಾಲಯ ಅನುಷ್ಠಾನವನ್ನು ಉಡುಪಿಯ ಉದ್ಯಮಿಗಳಾದ ಪ್ರೀತಿ ನಾಯಕ್ ಮತ್ತು ಜನಾರ್ದನ್ ನಾಯಕ್ ದಂಪತಿ ಮನೆಯಲ್ಲಿ ಚಾಲನೆ ನೀಡಲಾಯಿತು.

ಅನುಷ್ಠಾನ ಸಮಿತಿ ಜಿಲ್ಲಾ ಸಹ ಸಂಚಾಲಕ ಮತ್ತು ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ ಸಂಘಟಿಸಿ ಮಾತನಾಡಿ, ಈಗಾಗಲೇ ಉಡುಪಿ ತಾಲೂಕಿನಲ್ಲಿ ಮನೆಯೇ ಗ್ರಂಥಾಲಯ ಅಭಿಯಾನ ಅತ್ಯಂತ ಯಶಸ್ವಿ ಯಾಗಿ ನಡೆಯುತ್ತಿದೆ, ಇತ್ತೀಚಿಗೆ ನಮ್ಮ ಕಾರ್ಯಕ್ರಮಗಳನ್ನು ಮೆಚ್ಚಿ ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಮಾನಸ ಮನೆಗೊಂದು ಗ್ರಂಥಾಲಯ ಅಭಿಯಾನವನ್ನು ಜಿಲ್ಲೆಯಲ್ಲಿ ಅನುಷ್ಠಾನಿಸಲು ನಮಗೆ ಅವಕಾಶ ನೀಡಿದ್ದಾರೆ. ಇದನ್ನು ಕೂಡ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಲ್ಲಿ ನಾವೆಲ್ಲರೂ ನಿರತರಾಗಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಅನುಷ್ಠಾನ ಸಮಿತಿಯ ಸದಸ್ಯರಾದ ಜನಾರ್ದನ್ ಕೊಡವೂರು, ರಂಜನಿ ವಸಂತ್, ದೀಪಾ ಚಂದ್ರಕಾಂತ್, ಸಿದ್ದ ಬಸಯ್ಯಸ್ವಾಮಿ ಚಿಕ್ಕಮಠ,ಡಾ. ರಶ್ಮಿ ಅಮ್ಮೆಂಬಳ, ರಾಘವೇಂದ್ರ ಪ್ರಭು ಕರ್ವಾಲು ಕಸಾಪ ಜಿಲ್ಲಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News