×
Ad

ಉಡುಪಿ: ಫೆ.11ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

Update: 2025-02-10 20:02 IST

ಉಡುಪಿ, ಫೆ.10: 110/11ಕೆವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ 110 ಕೆವಿ ಬಸ್‌ಬಾರ್ ಶಕ್ತಿ ಪರಿವರ್ತಕಗಳ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಮೆಸ್ಕಾಂ ಇಲಾಖೆಯಿಂದ ಫೆಬ್ರವರಿ 11ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನಾಳೆ ಮಂಗಳವಾರದಂದು ಬಜೆ ರೇಚಕ ಸ್ಥಾವರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಹೀಗಾಗಿ ಉಡುಪಿ ನಗರಸಭಾ ವ್ಯಾಪ್ತಿಗೆ ಕುಡಿಯುವ ನೀರಿನ ಸರಬರಾಜು ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News