×
Ad

ಉಡುಪಿ: ಜು.12ರಂದು ಪೊಳಲಿ ಪ್ರಶಸ್ತಿ ಪ್ರದಾನ

Update: 2025-07-10 18:28 IST

ಉಡುಪಿ, ಜು.10: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಉಡುಪಿ ಹಾಗೂ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಇವುಗಳ ಜಂಟಿ ಆಶ್ರಯದಲ್ಲಿ ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್.ಆರ್. ಹೆಗ್ಡೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜು.12ರ ಶನಿವಾರ ಬೆಳಗ್ಗೆ 10:30ಕ್ಕೆ ಎಂ.ಜಿ.ಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.

ಈ ಬಾರಿಯ ಪ್ರಶಸ್ತಿಯನ್ನು ಹಿರಿಯ ಲೇಖಕಿ ಹಾಗೂ ಇತಿಹಾಸ ತಜ್ಞೆ ಡಾ.ಮಾಲತಿ ಕೃಷ್ಣಮೂರ್ತಿ ಇವರಿಗೆ ಪ್ರದಾನ ಮಾಡಲಾಗುವುದು. ಅಧ್ಯಕ್ಷತೆಯನ್ನು ಎಂ.ಜಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವನಿತಾ ಮಯ್ಯ ವಹಿಸಲಿದ್ದು, ಹಿರಿಯ ವಿದ್ವಾಂಸರಾದ ಡಾ. ಪಾದೇಕಲ್ಲು ಷ್ಣು ಭಟ್ ಪ್ರಶಸ್ತಿ ಪ್ರದಾನ ಮಾಡಲಿರುವರು.

ಹಿರಿಯ ಇತಿಹಾಸ ಸಂಶೋಧಕರಾದ ಡಾ. ಪುಂಡಿಕಾ ಗಣಪಯ್ಯ ಭಟ್ ಪ್ರಶಸ್ತಿ ಪುರಸ್ಕೃತರ ಕುರಿತು ಅಭಿನಂದನಾ ಮಾತುಗಳೊಂದಿಗೆ ‘ಮೌಖಿಕ ಪರಂಪರೆ ಮತ್ತು ತುಳುವ ಇತಿಹಾಸ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಚೇಳಾರುಗುತ್ತು ಎಸ್.ಆರ್.ಹೆಗ್ಡೆ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ಇಂದಿರಾ ಹೆಗ್ಡೆ ಉಪಸ್ಥಿತರಿರುವರು ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News