ಆ. 12: ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ
Update: 2025-08-11 19:21 IST
ಉಡುಪಿ, ಆ.11: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಐಯುಟಿಯುಸಿಗೆ ಸಂಯೋಜಿತ ಗೊಂಡ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಉಡುಪಿ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಆಶಾ ಕಾರ್ಯಕರ್ತೆಯರು ಆ.12ರ ಬೆಳಗ್ಗೆ 11:00ಗಂಟೆಗೆ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಪ್ರತಿಭಟನೆ ನಡೆಸಲಿದೆ.
ಮುಖ್ಯಮಂತ್ರಿಗಳು ಘೋಷಿಸಿದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಠ 10,000ರೂ. ಗೌರವಧನವನ್ನು ಎಪ್ರಿಲ್ ಒಂದರಿಂದ ಅನ್ವಯವಾಗುವಂತೆ ಮತ್ತು ಇದೇ ಬಜೆಟ್‌ನಲ್ಲಿ ಘೋಷಿಸಿದ 1,000ರೂ. ಹೆಚ್ಚಳ ಮಾಡುವ ಆದೇಶವನ್ನು ಕೂಡಲೇ ನೀಡುವಂತೆ ಒತ್ತಾಯಿಸಿ ಈ ಧರಣಿ ಪ್ರತಿಭಟನೆ ನಡೆಯಲಿದೆ.
ಪ್ರತಿಭಟನೆಯಲ್ಲಿ ಜಿಲ್ಲೆಯ ಹೆಚ್ಚಿನ ಸಂಖ್ಯೆಯ ಆಶಾ ಕಾರ್ಯಕರ್ತೆಯರು ಭಾಗವಹಿಸುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.