ಉಡುಪಿ: ಆ.14ರಂದು ನೇರ ಸಂದರ್ಶನ
Update: 2026-08-11 21:56 IST
ಉಡುಪಿ, ಆ.11: ನಗರದ ನಿಟ್ಟೂರು ರಾ.ಹೆ 66ರ ಆಭರಣ ಮೋಟಾರ್ಸ್ ಪ್ರೈವೇಟ್ ಲಿ.ನಲ್ಲಿ ಆಗಸ್ಟ್ 14ರಂದು ಬೆಳಗ್ಗೆ 10:30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.
ಎಸೆಸೆಲ್ಸಿ, ಪಿಯುಸಿ, ಐಟಿಐ ಮತ್ತು ಡಿಪ್ಲೋಮಾ, ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತೀರ್ಣರಾದ ಆಭ್ಯರ್ಥಿ ಗಳು ತಮ್ಮ ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಹಾಗೂ 8150961875 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.