ಹೆಬ್ರಿ: ಆ.15ರಂದು ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರದಾನ

Update: 2026-08-13 19:34 IST

ಹೆಬ್ರಿ, ಆ.13: ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ.ಅಧಿಕಾರಿ ಯೂತ್ ಕ್ಲಬ್ ಪಡುಕುಡೂರು ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ 80ನೇ ಸ್ವಾತಂತ್ರ್ಯೋತ್ಸವ, ಎಂ.ಡಿ. ಅಧಿಕಾರಿ ಯೂತ್ ಕ್ಲಬ್ ಪಡುಕು ಡೂರು 2ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಪಡುಕುಡೂರು ಬೀಡು ಎಂ.ಡಿ. ಅಧಿಕಾರಿಯವರ ಪ್ರತಿಮೆ ಪ್ರತಿಷ್ಠಾಪನೆಯ ನೆನಪಿನ ಸಂಭ್ರಮ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಗಸ್ಟ್ 15ರಂದು ನಡೆಯಲಿವೆ.

ಆ.15ರಂದು ಬೆಳಗ್ಗೆ 8 ಗಂಟೆಗೆ ಎಂ.ಡಿ.ಅಧಿಕಾರಿ ಪ್ರತಿಮೆಗೆ ಮಾಲಾರ್ಪಣೆಯ ಬಳಿಕ ಶಾಲೆಯಲ್ಲಿ ರಾಷ್ಟ್ರ ಧ್ವಜಾರೋಹಣ ನಡೆಯಲಿದೆ. ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ‘ಸ್ವಾತಂತ್ರ್ಯ ಸೇನಾನಿ ಎಂ.ಡಿ.ಅಧಿಕಾರಿ ಪ್ರಶಸ್ತಿ’ ನೀಡಿ ಸನ್ಮಾನಿಸಲಾಗುವುದು.

2025-26ನೇ ಸಾಲಿನಲ್ಲಿ ಎಸೆಸೆಲ್ಸಿ ಹಾಗೂ ಪಿಯುಸಿಯಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿ ಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಉಡುಪಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಪಡುಕುಡೂರು ಶಾಲೆಯ ಮುಖ್ಯ ಶಿಕ್ಷಕ ಹರೀಶ ಪೂಜಾರಿ ಮತ್ತು ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾವಿನಕಟ್ಟೆ ಶಂಕರ ಶೆಟ್ಟಿ ಪಂಚವಟಿ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದು ಎಂ.ಡಿ. ಅಧಿಕಾರಿ ಯೂತ್ ಕ್ಲಬ್ ಅಧ್ಯಕ್ಷ ಸಂದೀಪ್ ಶೆಟ್ಟಿ ಪಟೇಲರ ಮನೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News