ಉಡುಪಿ, ಸೆ.13: ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 2025-26ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.13 ರಂದು ಉಡುಪಿಯ ಪುರಭವನದಲ್ಲಿ ಜರಗಿತು.

ಅಧ್ಯಕ್ಷತೆಯನ್ನು ಸೊಸೈಟಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ವಹಿಸಿದ್ದರು. ಸಂಘದ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ.ಶೇರಿಗಾರ್ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳನ್ನು ಮಂಡಿಸಿದರು. ವರದಿ ಸಾಲಿನ ಅಂತ್ಯಕ್ಕೆ ಸಂಘವು 22,869 ಸದಸ್ಯರು, 4.89 ಕೋಟಿ ರೂ. ಪಾಲು ಬಂಡವಾಳ ಹಾಗೂ 658.80 ಕೋಟಿ ರೂ. ಠೇವಣಿ ಹೊಂದಿದ್ದು, 533.96 ಕೋಟಿ ರೂ. ಹೊರಬಾಕಿ ಸಾಲ ಹೊಂದಿದೆ.

2025-26ನೇ ಸಾಲಿನಲ್ಲಿ ಸುಮಾರು 4,089 ಕೋಟಿ ರೂ. ವಾರ್ಷಿಕ ವಹಿವಾಟು ನಡೆಸಿದ್ದು, ಸದಸ್ಯರ ಸಹಕಾರದಿಂ 15.09 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಿಸಲಾಯಿತು.

ಸಭಾ ಕಾರ್ಯಕ್ರಮ: ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉದ್ಘಾಟಿಸಿದರು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿದರು.

ಈ ಸಂದರ್ಭದಲ್ಲಿ ಬಾಲಪ್ರತಿಭೆ ಸಚಿತ ರಾವ್, ಮಿಸ್ ಯೂನಿವರ್ಸ್ ಇಂಡಿಯಾ ಸ್ಪರ್ಧೆಯ ರಾಷ್ಟ್ರೀಯ ವೇದಿಕೆ ಯಲ್ಲಿ ಉಡುಪಿಯನ್ನು ಪ್ರತಿನಿಧಿಸಿದ ಸ್ಫೂರ್ತಿ ಡಿ.ಶೆಟ್ಟಿ, ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ವಿಶ್ವದಾಖಲೆ ಮಾಡಿದ ವಿದುಷಿ ಸಂಗೀತ ಬಾಲಚಂದ್ರ, ಸ್ವಾವಲಂಬಿ ಸುಗುಣಾ ಪೈ ಟಿ., ಪವರ್ ಲಿಫ್ಟರ್ ಆ್ಯನ್ನಿ ಲಿಸಾ ಅಮ್ಮನ್ನ ಅವರನ್ನು ಗೌರವಿಸಲಾಯಿತು.

ಸಂಘದ ಮಲ್ಪೆ ಶಾಖೆಯಲ್ಲಿ ಸುಮಾರು 11 ವರ್ಷಗಳ ಕಾಲ ದೈನಿಕ ಠೇವಣಿ ಸಂಗ್ರಾಹಕರಾಗಿ ಸೇವೆ ಸಲ್ಲಿಸಿ ನಿವೃತ್ತ ಗೋವಿಂದಾಸ್ ಕೆ.ಸುವರ್ಣ ಬೀಳ್ಕೊಡಲಾಯಿತು. ಸಂಘದ ಆಡಳಿತ ಮಂಡಳಿ ಸದಸ್ಯರಾದ ಸಂಜೀವ ಕಾಂಚನ್, ಎಲ್. ಉಮಾನಾಥ, ಹಾಜಿ ಸಯ್ಯದ್ ಅಬ್ದುಲ್ ರಜಾಕ್, ವಿನಯ ಕುಮಾರ್ ಟಿ.ಎ., ಪದ್ಮನಾಭ ಕೆ.ನಾಯಕ್, ಸದಾಶಿವ ನಾಯ್ಕ್, ಮನೋಹರ್ ಎಸ್.ಶೆಟ್ಟಿ, ಸಾಧು ಸಾಲ್ಯಾನ್, ಜಯಾ ಶೆಟ್ಟಿ, ಗಾಯತ್ರಿಎಸ್.ಭಟ್ ಉಪಸ್ಥಿತರಿದ್ದರು.

ಸಂಘದ ಮಲ್ಪೆ ಶಾಖಾ ವ್ಯವಸ್ಥಾಪಕ ನವೀನ್ ಕೆ. ಕಾರ್ಯಕ್ರಮ ನಿರೂಪಿಸಿದರು. ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor