ಉಡುಪಿ: ಅ.16ರಂದು ಏಡ್ಸ್ ಜಾಗೃತಿ ಮ್ಯಾರಥಾನ್
ಉಡುಪಿ, ಅ.15: ಎಡ್ಸ್ ಹಾಗೂ ಎಚ್ಐವಿ ಕುರಿತು ಜನಜಾಗೃತಿ ಮೂಡಿಸಲು ಅ.16ರ ಶುಕ್ರವಾರ ಉಡುಪಿ ಜಿಲ್ಲೆಯ ಕಾಲೇಜು ವಿದ್ಯಾರ್ಥಿ ಗಳಿಗೆ 5 ಕಿ.ಮೀ. ಮ್ಯಾರಥಾನ್ ಸ್ಪರ್ಧೆಗೆ ನಗರದ ಅಜ್ಜರಕಾಡಿನಲ್ಲಿರುವ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಮುಂಜಾನೆ 7 ಗಂಟೆಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಚಾಲನೆ ನೀಡಲಿದ್ಧಾರೆ ಎಂದು ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ.ಚಿದಾನಂದ ಸಂಜು ತಿಳಿಸಿದ್ದಾರೆ.