×
Ad

ಉಡುಪಿ: ಜು.17 ರಂದು ನೇರ ಸಂದರ್ಶನ

Update: 2026-07-14 20:24 IST

ಉಡುಪಿ, ಜು.14:ಉಡುಪಿಯ ಕುಂಜಿಬೆಟ್ಟಿನಲ್ಲಿರುವ ಪ್ರಗತಿ ಬಿಸಿನೆಸ್ ಪಾರ್ಕ್‌ನ ಕ್ರೋಮಾ ಬಿಲ್ಡಿಂಗ್‌ನ ಎರಡನೇ ಮಹಡಿಯಲ್ಲಿ ಕಾರ್ಯಾ ಚರಿಸುತ್ತಿರುವ ಆಕ್ಸಿಸ್ ಮ್ಯಾಕ್ಸ್ ಲೈಫ್ ಇಲ್ಲಿ ಜುಲೈ 17 ರಂದು ಬೆಳಿಗ್ಗೆ 10:30ಕ್ಕೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಇತರೆ ಪದವಿ ವಿದ್ಯಾರ್ಹತೆ ಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಜಿಲ್ಲಾಧಿಕಾರಿ ಸಂಕೀರ್ಣ ರಜತಾದ್ರಿ ಮಣಿಪಲ ಅಥವಾ ದೂ.ಸಂಖ್ಯೆ: 8105618291, 9945856670, 9901472710, 8150961875 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News