×
Ad

ಮೇ 17ರಂದು ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನ

Update: 2025-05-13 17:51 IST

ಉಡುಪಿ, ಮೇ 13: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮೇ 17ರಂದು ಉಡುಪಿಯ ಕೊಡವೂರು ಮಹತೋಭಾರ ಶ್ರೀಶಂಕರ ನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ ಎಂದು ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 8:15ಕ್ಕೆ ಮಲ್ಪೆಯ ಸಿಟಿಜನ್ ಸರ್ಕಲ್‌ನಿಂದ ಮೆರವಣಿಗೆಯೊಂದಿಗೆ ಸಮ್ಮೇಳನಾಧ್ಯಕ್ಷ ಪ್ರೊ.ಎಂ.ಎಲ್.ಸಾಮಗ ಅವರನ್ನು ಸ್ವಾಗತಿಸಿ, 9:25ಕ್ಕೆ ಧ್ವಜಾ ರೋಹಣ ಹಾಗೂ ಪರಿಷತ್ ಧ್ವಜಾರೋಹಣ ನಡೆಯಲಿದೆ. 9:30ಕ್ಕೆ ನೃತ್ಯನಿಕೇತನ ಕೊಡವೂರು ಇವರಿಂದ ನೃತ್ಯ ಸಿಂಚನ ನಡೆಯಲಿದೆ ಎಂದರು.

ಬೆಳಗ್ಗೆ 9.50ಕ್ಕೆ ದಿ| ಕುರಾಡಿ ಸೀತಾರಾಮ ಅಡಿಗ ನೆನಪಿನ ಪುಸ್ತಕ ಮಳಿಗೆ ಯನ್ನು ಸಾಹಿತಿ ಡಾ.ಗಣ ನಾಥ್ ಎಕ್ಕಾರ್ ಉದ್ಘಾಟಿಸಲಿರುವರು. ಕನ್ನಡದ ಹಿರಿಯ ವಿಮರ್ಶಕ ಎಸ್.ಆರ್.ವಿಜಯಶಂಕರ್ ಸಮ್ಮೇಳನವನ್ನು ಉದ್ಘಾಟಿಸ ಲಿರುವರು. ಹಿರಿಯ ಸಾಹಿತಿ ಎಚ್.ಡುಂಡಿರಾಜ್ ಭಾಗವಹಿಸಲಿದ್ದಾರೆ. ಸಾಧಕರಾದ ಜಯನ್ ಮಲ್ಪೆ, ಸಿ.ಎಸ್.ರಾವ್, ವಿ.ಜಿ.ಶೆಟ್ಟಿ, ಭುವನ ಪ್ರಸಾದ್ ಹೆಗ್ಡೆ, ಹರಿಪ್ರಸಾದ್ ರೈ, ವಾದಿರಾಜ್ ಭಟ್, ವೆಂಕಟೇಶ್ ಪೈ, ವಿನಯ್ ಆಚಾರ್ಯ ಮುಂಡ್ಕೂರ್ ಅವರನ್ನು ಅಭಿನಂದಿಸಲಾಗು ವುದು ಮತ್ತು ಇದೇ ಸಂದರ್ಭದಲ್ಲಿ ನಾಲ್ಕು ಪುಸ್ತಕಗಳು ಲೋಕಾರ್ಪಣೆಗೊಳ್ಳಲಿದೆ ಎಂದು ಅವರು ವಿವರಿಸಿದರು.

ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಶಿಷ್ಟ ರೀತಿಯ ಯಕ್ಷ ಕವಿಗೋಷ್ಠಿ, ಯಕ್ಷಗಾನ, ದೃಶ್ಯ ಭಾಷೆ ಸಂಸ್ಕೃತಿ ಇದರ ಕುರಿತಾದ ವಿಚಾರಗೋಷ್ಠಿ, ಸಮ್ಮೇಳನ ಅಧ್ಯಕ್ಷರೊಂದಿಗೆ ಮಾತುಕತೆ ನಡೆಯಲಿದೆ.

ಸಂಜೆ 4.35ಕ್ಕೆ ನಡೆಯಲಿರುವರು ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವರನ್ನು ಸನ್ಮಾನಿಸಲಾಗುವುದು. ಸಾಹಿತಿ ಡಾ. ನಿಕೇತನ ಸಮಾರೋಪ ಭಾಷಣ ಮಾಡಲಿರುವರು. ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಯಕ್ಷ ರಂಗಾಯಣ ಕಾರ್ಕಳ ಇವರಿಂದ ಕುಮಾರವ್ಯಾಸ ಭಾರತದ ವಿರಾಟ ಪರ್ವದಿಂದ ಆಯ್ದ ಭಾಗ ಆರೊಡನೆ ಕಾದು ವೇನು ಎಂಬ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಗಳಾದ ಜನಾರ್ದನ ಕೊಡವೂರು, ರಂಜಿನಿ ವಸಂತ್, ಸ್ವಾಗತ ಸಮಿತಿಯ ಅಧ್ಯಕ್ಷ ಸಾಧು ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಸತೀಶ್ ಕೊಡವೂರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News