ಮೇ 18: ವಿಪ್ರರಿಗಾಗಿ ಜಿಲ್ಲಾಮಟ್ಟದ ಜಾನಪದ ನೃತ್ಯ ಸ್ಪರ್ಧೆ
ಉಡುಪಿ, ಮೇ 15: ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ವಿಪ್ರ ಬಾಂಧವರಿಗಾಗಿ ಉಡುಪಿ ಜಿಲ್ಲಾಮಟ್ಟದ ಜಾನಪದ ನೃತ್ಯ ಸ್ಪರ್ಧೆ ‘ಜಾನಪದ ನೃತ್ಯ ಸಂಭ್ರಮ 2025’ನ್ನು ಮೇ 18ರಂದು ಬೆಳಗ್ಗೆ 9ಗಂಟೆಗೆ ಉಡುಪಿ ಗುಂಡಿಬೈಲಿನ ಬ್ರಾಹ್ಮಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
40ರ ಒಳಗಿನ ಹಾಗೂ 40ರ ಮೇಲಿನ ಹರೆಯದವರಿಗಾಗಿ ಎರಡು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು ಪ್ರಥಮ, ದ್ವಿತೀಯ ಹಾಗೂ ತೃತೀಯ ನಗದು ಸಹಿತ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು ಎಂದು ಪರಿಷತ್ ಅಧ್ಯಕ್ಷ ಚಂದ್ರಕಾಂತ್ ಕೆ.ಎನ್. ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ವಿಪ ಉದ್ಯಮಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿಪ್ರ ಉದ್ಯಮಗಳ ಮಳಿಗೆಗಳಿಗೆ ಉಚಿತವಾದ ಅವಕಾಶವನ್ನು ಕಲ್ಪಿಸಲಾಗಿದೆ. ಅದೇ ರೀತಿ ಆಹಾರ ಖಾದ್ಯಗಳ ಮೇಳವನ್ನು ಕೂಡ ಸಾರ್ವಜನಿಕರಿಗಾಗಿ ಹಮ್ಮಿಕೊಳ್ಳಲಾಗಿದೆ. ಈ ಮೇಳ ಬೆಳಗ್ಗೆ 9 ರಿಂದ ರಾತ್ರಿ 8 ಗಂಟೆಯವರೆಗೂ ತೆರೆದಿರುತ್ತದೆ ಎಂದು ಅವರು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ವಿಷ್ಣುಪ್ರಸಾದ್ ಪಾಡಿಗಾರ್, ಚೈತನ್ಯ ಎಂ.ಜಿ., ರವಿರಾಜ್ ರಾವ್, ರಘುಪತಿ ರಾವ್ ಉಪಸ್ಥಿತರಿದ್ದರು.