×
Ad

ಉಡುಪಿ| ಲೈಂಗಿಕ ದೌರ್ಜನ್ಯ ಪ್ರಕರಣ: ಪೋಕ್ಸೊ ಆರೋಪಿಗೆ 20 ವರ್ಷ ಜೈಲುಶಿಕ್ಷೆ

Update: 2025-07-19 22:12 IST

ಉಡುಪಿ, ಜು.19: ಪರಿಶಿಷ್ಟ ಜಾತಿಗೆ ಸೇರಿದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗೆ 20 ವರ್ಷ ಕಠಿಣ ಜೈಲುಶಿಕ್ಷೆ ವಿಧಿಸಿ ಉಡುಪಿ ಪೋಕ್ಸೊ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.

ಬಾಗಲಕೋಟೆ ಜಿಲ್ಲೆಯ ಮಂಜುನಾಥ್ ಎನ್. ಶಿಕ್ಷೆಗೆ ಗುರಿಯಾದ ಆರೋಪಿ. ಈತ ಸಂತ್ರಸ್ತ ಬಾಲಕಿಯನ್ನು ಬಲವಂತದಿಂದ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ದೈಹಿಕ ಸಂಪರ್ಕ ಬೆಳೆಸಿದ್ದನು. ಈ ವಿಚಾರವನ್ನು ಯಾರಿಗಾದರೂ ಹೇಳಿದ್ದಲ್ಲಿ, ತಾನು ವಿಡಿಯೋ ಮಾಡಿದ್ದು, ಮನೆಯವರಿಗೆ ಕಳುಹಿಸುವುದಾಗಿ ಬೆದರಿಸಿದ್ದನು.

ನಂತರ ವಿಷಯ ತಿಳಿದ ಬಾಲಕಿಯ ತಾಯಿಯೂ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಅಂದಿನ ಕಾರ್ಕಳ ಡಿವೈಎಸ್ಪಿಅರವಿಂದ್ ಕಲ್ಲಗುಜ್ಜಿ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ್ದರು. ಒಟ್ಟು 39 ಸಾಕ್ಷಿಗಳ ಪೈಕಿ ಸಂತ್ರಸ್ತ ಬಾಲಕಿ ಸಹಿತ 16 ಸಾಂದರ್ಭಿಕ ಸಾಕ್ಷಿಗಳ ವಿಚಾರಣೆ ನಡೆಸಿ ಆರೋಪಿಯನ್ನು ತಪ್ಪಿತಸ್ಥ ಎಂದು ನ್ಯಾಯಧೀಶ ಶ್ರೀನಿವಾಸ್ ಸುವರ್ಣ ತೀರ್ಮಾನಿಸಿದರು. ಅದರಂತೆ ಆರೋಪಿಗೆ 20 ವರ್ಷಗಳ ಕಠಿಣ ಕಾರಗೃಹ ಶಿಕ್ಷೆ ಹಾಗು 25 ಸಾವಿರ ರೂ. ದಂಡ ವಿಧಿಸಿದ್ದು, ನೊಂದ ಬಾಲಕಿಗೆ ಸರಕಾರದಿಂದ 1.50 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News