ಬಡಗಬೆಟ್ಟು ಸೊಸೈಟಿಗೆ ಸತತ 20ನೇ ಬಾರಿಗೆ ಸಾಧನಾ ಪ್ರಶಸ್ತಿ

Update: 2026-08-22 20:48 IST

ಉಡುಪಿ, ಆ.22: ಸಹಕಾರ ಕ್ಷೇತ್ರದಲ್ಲಿ ನಿರಂತರ ಪ್ರಗತಿ ಮತ್ತು ಸರ್ವತೋಮುಖ ಅಭಿವೃದ್ಧಿಯನ್ನು ಸಾಧಿಸಿರುವ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉಡುಪಿ ಇದರ 2025-26ನೇ ಸಾಲಿನ ಕಾರ್ಯಕ್ಷಮತೆಗಾಗಿ ಸತತ 20ನೇ ಬಾರಿಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ನೀಡಲ್ಪಡುವ ಸಾಧನಾ ಪ್ರಶಸ್ತಿ ಲಭಿಸಿದೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ.ಶೇರಿಗಾರ್ ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ಎಲ್.ಉಮಾನಾಥ, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಾದ ಲಾವಣ್ಯ ಕೆ.ಆರ್., ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರ ರಮೇಶ್ ಎಚ್.ಎನ್. ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News