×
Ad

ಜ. 20ರಂದು ಪಿ.ಡಿ.ಓ ಅಮಾನತಿಗೆ ಆಗ್ರಹಿಸಿ ಧರಣಿ

Update: 2024-01-18 20:58 IST

ಮಲ್ಪೆ: ತೆಂಕನಿಡಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೀಸಲು ಕ್ಷೇತ್ರದ ಶ್ರೀನಗರದಲ್ಲಿ ಅನಧಿಕೃತ ಕೋಳಿ ಪಾಮ್ ತೆರವುಗೊಳಿಸದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆ ವತಿಯಿಂದ ಜ.20ರಂದು ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಸೇನೆಯ ಜಿಲ್ಲಾಧ್ಯಕ್ಷ ಹರೀಶ್ ಸಲ್ಯಾನ್ ತಿಳಿಸಿದ್ದಾರೆ.

ಶ್ರೀನಗರದ ನಿವಾಸಿಗಳ ಆಕ್ಷೇಪವಿದ್ದರೂ ಗ್ರಾಪಂನಿಂದ ಯಾವುದೇ ಪರವಾನಿಗೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪ್ರಾರಂಭಿಕ ಪ್ರಮಾಣ ಪತ್ರ ಪಡೆಯದೆ ಚಿಕನ್ ಸ್ಟಾಲ್ ಉದ್ಯಮ ನಡೆಸಲಾಗುತ್ತಿದೆ. ಈ ಬಗ್ಗೆ ಸ್ಥಳೀಯ ನಿವಾಸಿಗಳಿಗೆ ಪರಿಸರದಲ್ಲಿ ಪ್ರತಿನಿತ್ಯ ದುರ್ವಾನೆ ಮತುತಿ ಕೋಳಿ ಮಾಂಸದ ತ್ಯಾಜ್ಯವನ್ನು ಎಲ್ಲೆಡೆ ಎಸೆಯುತ್ತಿರುವುದರಿಂದ ಪ್ರಾಣಿ ಪಕ್ಷಿಗಳು ಕುಡಿಯುವ ನೀರಿನ ಬಾವಿಗಳಿಗೆ ತಂದುಹಾಕುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News